‘ರಾಬರ್ಟ್’ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಕೊಲೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ರಾಜೇಶ್ ಅಲಿಯಾಸ್ ಕರಿಯಾ ರಾಜೇಶ್‌ನನ್ನು ಪೊಲೀಸರು ಬಂಧಿಸಿದ ಜೈಲಿಗಟ್ಟಿದ್ದಾರೆ.
ಬೆಂಗಳೂರು (ಮಾ.16): ‘ರಾಬರ್ಟ್’ (Roberrt) ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ (Umapathy Srinivasa Gowda) ಕೊಲೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ರಾಜೇಶ್ ಅಲಿಯಾಸ್ ಕರಿಯಾ ರಾಜೇಶ್‌ನನ್ನು ಪೊಲೀಸರು ಬಂಧಿಸಿದ ಜೈಲಿಗಟ್ಟಿದ್ದಾರೆ.
ಸ್ಯಾಂಡಲ್‌ವುಡ್ ಚಲನಚಿತ್ರ ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ ಎನ್ನಲಾದ ಕರಿಯಾ ರಾಜೇಶ್ ಹಲವು ವರ್ಷಗಳಿಂದ ಪೊಲೀಸರಿಂದ ತಲೆ ಮಡೆಸಿಕೊಂಡು ತಿರುಗಾಡುತ್ತಿದ್ದನು. ಇನ್ನು ಪ್ರಕರಣದ ಆರೋಪಿ ಬಂಧನಕ್ಕೆ ತೀವ್ರ ಶೋಧ ಮಾಡಿದಾಗ ಅಜ್ಞಾತ ಸ್ಥಳಕ್ಕೆ ಹೋಗುತ್ತಿದ್ದನು. ಜೊತೆಗೆ, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 10 ಕ್ಕೂ ಅಧಿಕ ಕೇಸ್‌ಗಳಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದನು. ಆದರೆ, ಈಗ ಕರಿಯಾ ರಾಜೇಶ್‌ನ ಗ್ರಹಚಾರ ಕೆಟ್ಟಿದ್ದು, ಪೊಲೀಸರ ಕಾರ್ಯಾಚರಣೆ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಪೊಲೀಸ್‌ಠಾಣೆ ಪೊಲೀಸರು ಕೊಲೆ ಸಂಚು ಪ್ರಕರಣದ ಆರೋಪಿಯನ್ನು ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ.
ಬೆಂಗಳೂರಲ್ಲಿ ಹೆತ್ತ ಮಗಳನ್ನೇ ಕೊಲೆಗೈದ ದುಷ್ಟ ತಂದೆ: ದೊಣ್ಣೆಯಿಂದ ಹಲ್ಲೆ
ವಾರೆಂಟ್ ಜಾರಿಯಾದರೂ ಕೋರ್ಟ್‌ಗೆ ಹಾಜರಾಗದ ಆರೋಪಿ: ಬೆಂಗಳೂರಿನ ಕೆಂಪೇಗೌಡ ಠಾಣೆ ಪೊಲೀಸರಿಂದ ಆರೋಪಿ ಕರಿಯಾ ರಾಜೇಶ್ ಬಂಧನವಾಗಿದೆ. ಈತನ ಮೇಲೆ ಬಂಧನದ ವಾರೆಂಟ್ ಜಾರಿ ಆಗಿದ್ದರೂ ಹಲವು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿಕೊಮಡು ಸುತ್ತಾಡುತ್ತಿದ್ದನು. ಜೊತೆಗೆ, ಹೊರಗಿದ್ದುಕೊಂಡು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದನು. ಅಲ್ಲದೇ 10ಕ್ಕೂ ಹೆಚ್ಚು ಕೇಸ್‌ಗಳಲ್ಲಿ ರಾಜೇಶ್ ಬೇಕಾಗಿದ್ದನು. ಹಲವು ಬಾರಿ ಕೋರ್ಟ್ ವಾರೆಂಟ್ ಜಾರಿ ಆಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಈಗ ಸದ್ಯ ಆರೋಪಿ ರಾಜೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ವಿವಿಧ ಠಾಣೆಗಳಲ್ಲಿ ಕ್ರಿಮಿನಲ್ ಕೇಸ್: ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಾದ ಜಯನಗರ, ಚಾಮರಾಜಪೇಟೆ, ಕೆಂಪೇಗೌಡ ನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಸಂಚು, ಆಫ್ ಮರ್ಡರ್, ಹಲ್ಲೆ ಸೇರಿ ಹಲವು ಪ್ರಕರಣಗಳಲ್ಲಿ ಈಗ ಪೊಲೀಸರಿಗೆ ಬೇಕಾಗಿದ್ದನು. ಈಗ ಎಲ್ಲ ಪ್ರಕರಣಗಳನ್ನು ವಿಚಾರಣೆಗೆ ಕೈಗೊಂಡು ಶಿಕ್ಷೆ ಪ್ರಕಟಿಸುವ ಸಾಧ್ಯತೆಯಿದೆ.
ಕಳೆದ ವರ್ಷ ಇಬ್ಬರ ಸೆರೆ: ಉಮಾಪತಿ ಶ್ರೀನಿವಾಸ್ ಗೌಡ ಕೊಲೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು 2022ರ ಜನವರಿಯಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದರು. ದರ್ಶನ್ ಅಲಿಯಾಸ್ ರಾಬರಿ ಮತ್ತು ಸಂಜು ಬಂಧಿತರು. ಆರೋಪಿಗಳು ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದರು. ಇತ್ತೀಚೆಗೆ ಸುಂಕದಕಟ್ಟೆಯ ಚೈತ್ರಾ ಬಾರ್ ಬಳಿ ಈ ಇಬ್ಬರು ಆರೋಪಿಗಳು ಇರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.
Bengaluru Crime: ಪ್ರೀತಿಸಿದ ಯುವತಿಗೆ ಮದುವೆ ಫಿಕ್ಸ್: ಮನೆಗೆ ನುಗ್ಗಿ ರೇಪ್ ಮಾಡಿ ಕೊಲೆಗೈದ ಪ್ರೇಮಿ
ಪ್ರಕರಣದ ಹಿನ್ನೆಲೆ ಏನು? : ಭೂಗತ ಪಾತಕಿ ಬಾಂಬೆ ರವಿ (Bombay Ravi) ಸೂಚನೆ ಮೇರೆಗೆ ಅರೋಪಿಗಳು ನಿರ್ಮಾಪಕ ಉಮಾಪತಿ, ಸಹೋದರ ದೀಪಕ್, ಕುಖ್ಯಾತ ರೌಡಿ ಶೀಟರ್‌ಗಳಾದ ಸೈಕಲ್ ರವಿ ಹಾಗೂ ಬೇಕರಿ ರಘು ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅದರಂತೆ 10ಕ್ಕೂ ಹೆಚ್ಚು ಆರೋಪಿಗಳು 2020ರ ಡಿ.20ರ ಮುಂಜಾನೆ 5 ಗಂಟೆ ಸುಮಾರಿಗೆ ಜಯನಗರ 7ನೇ ಬ್ಲಾಕ್‌ನ ನ್ಯಾಷನಲ್ ಕಾಲೇಜು ಮೈದಾನದ ಬಳಿ ಟೆಂಪೋ ಟ್ರಾವೆಲರ್ ವಾಹನದಲ್ಲಿ ಮಾರಕಾಸ್ತ್ರ ಹಿಡಿದು ಹೊಂಚು ಹಾಕಿ ಕುಳಿತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಜಯನಗರ ಠಾಣೆ ಇನ್ಸ್‌ಪೆಕ್ಟರ್ ಸುದರ್ಶನ್ ಅನುಮಾನಗೊಂಡು ವಶಕ್ಕೆ ಪಡೆಯಲು ಮುಂದಾದಾಗ, ಪೊಲೀಸರ ಮೇಲೆಯೇ ಟೆಂಪೋ ಟ್ರಾವೆಲರ್ ಹತ್ತಿಸಲು ಯತ್ನಿಸಿ ಮತ್ತು ಲಾಂಗ್‌ನಿಂದ ಹಲ್ಲೆಗೆ ಮುಂದಾಗಿ ಪರಾರಿಯಾಗಿದ್ದರು. ಈ ವೇಳೆ ಪೊಲೀಸರು ಕೆಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ನಿರ್ಮಾಪಕ ಉಮಾಪತಿ ಸೇರಿದಂತೆ ಕೆಲವರ ಹತ್ಯೆಗೆ ಹೊಂಚು ಹಾಕಿ ಕುಳಿತ್ತಿದ್ದಾಗಿ ಬಾಯ್ಬಿಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಯನಗರ ಠಾಣೆ ಪೊಲೀಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
