ಶಿವಮೊಗ್ಗದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ..!
ಬಸವನಗಂಗೂರು-ನವುಲೆ ನಡುವಿನ ಛಾನಲ್ ಸುರಂಗದ ಬಳಿ ನವುಲೆ ನಾಗೇಶ (30) ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಕಾರಣವೇನೆಂಬುದು ತಿಳಿದುಬಂದಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಶಿವಮೊಗ್ಗ: ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಹೊರವಲಯದ ಬಸವನಗಂಗೂರು ಸಮೀಪ ನಡೆದಿದೆ.
ನವುಲೆ ನಾಗೇಶ (30) ಹತ್ಯೆಗೀಡಾದ ವ್ಯಕ್ತಿ. ಬಸವನಗಂಗೂರು-ನವುಲೆ ನಡುವಿನ ಛಾನಲ್ ಸುರಂಗದ ಬಳಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಕಾರಣವೇನೆಂಬುದು ತಿಳಿದುಬಂದಿಲ್ಲ. ನಾಗೇಶನ ವಿರುದ್ಧ ಶಿವಮೊಗ್ಗ ಗ್ರಾಮಾಂತರ, ವಿನೋನನಗರ ಠಾಣೆಗಳಲ್ಲಿ ಹಲವು ದೂರು ದಾಖಲಾಗಿವೆ.
ಪತ್ರಿಕೆ ಮಾಲೀಕ ಅರೆಸ್ಟ್: ಕಚೇರಿಯಲ್ಲಿ ಅಶ್ಲೀಲ ಫೋಟೋ, ವಿಡಿಯೋಗಳು ಇದ್ದ CD,ಪೆನ್ ಡ್ರೈವ್ ಪತ್ತೆ
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿನೋಬನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಶಿವಮೊಗ್ಗದಲ್ಲಿ ಕೊರೋನಾ ಸ್ಫೋಟ
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 600ರ ಗಡಿ ದಾಟಿದೆ. ಬುಧವಾರ ಹೊಸದಾಗಿ 46 ಕೋವಿಡ್-19 ಪ್ರಕರಣ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 644ಕ್ಕೆ ಹೆಚ್ಚಳವಾಗಿದೆ. ಓರ್ವರು ಮೃತಪಟ್ಟಿದ್ದಾರೆ.
ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿವೆ. ಬುಧವಾರ ಒಂದೇ ದಿನ ಶಿವಮೊಗ್ಗ ನಗರದಲ್ಲಿ 37 ಪ್ರಕರಣ ಪತ್ತೆಯಾಗಿದೆ. ಉಳಿದಂತೆ ಭದ್ರಾವತಿಯಲ್ಲಿ 5, ಸಾಗರ 1 ಹಾಗೂ ಶಿಕಾರಿಪುರ ತಾಲೂಕಿನಲ್ಲಿ 3 ಪ್ರಕರಣ ಪತ್ತೆಯಾಗಿವೆ. ಇಲ್ಲಿಯವರೆಗೆ ಪತ್ತೆಯಾದ 644 ಸೋಂಕಿತರಲ್ಲಿ ಬುಧವಾರ ಗುಣಮುಖರಾದ ಐದು ಮಂದಿ ಸೇರಿ ಒಟ್ಟು 244 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ 388 ಸಕ್ರಿಯ ಪ್ರಕರಣಗಳಿದ್ದು, ಅವರಲ್ಲಿ 165 ಮಂದಿ ನಿಗದಿತ ಆಸ್ಪತ್ರೆಯಲ್ಲಿ, 211 ಮಂದಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಗೂ 12 ಮಂದಿ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ವಲಯ 195 ಹೆಚ್ಚಳವಾಗಿದೆ.