Asianet Suvarna News Asianet Suvarna News

Madhya Pradesh: ವಕೀಲ ಆತ್ಮಹತ್ಯೆ; ಜಬಲ್‌ಪುರ ಹೈಕೋರ್ಟ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ

ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ಥೆಯ ಪರ ವಾದ ಮಾಡುತ್ತಿದ್ದ ವಕೀಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಸಿಟ್ಟಿಗೆದ್ದ ವಕೀಲರು ಮಧ್ಯ ಪ್ರದೇಶ ಹೈಕೋರ್ಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ruckus at madhya pradesh high court after lawyer dies by himself ash
Author
First Published Oct 1, 2022, 11:52 AM IST

ವಕೀಲರೊಬ್ಬರು ಆತ್ಮಹತ್ಯೆ (Lawyer Suicide) ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಮಧ್ಯಪ್ರದೇಶ ಹೈಕೋರ್ಟ್‌ (Madhya Pradesh High Court) ಕ್ಯಾಂಪಸ್‌ನಲ್ಲಿ ವಕೀಲರು  ಹಿಂಸಾತ್ಮಕ ಪ್ರತಿಭಟನೆಯನ್ನು ನಡೆಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ (Rape Case) ಎದುರು ಪಕ್ಷದ ವಕೀಲರೊಂದಿಗೆ ವಾದ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಕೀಲರ ಮೃತದೇಹವನ್ನು ಇತರೆ ವಕೀಲರು ಹೈಕೋರ್ಟ್‌ ಆವರಣಕ್ಕೆ ತಂದ ನಂತರ ಮಧ್ಯಪ್ರದೇಶ ಹೈಕೋರ್ಟ್‌ನ ಜಬಲ್‌ಪುರ ಪೀಠವು (Jabalpur Bench) ಶುಕ್ರವಾರ ಅಭೂತಪೂರ್ವ ದೃಶ್ಯಗಳಿಗೆ ಸಾಕ್ಷಿಯಾಯಿತು. ಅತ್ಯಾಚಾರ ಆರೋಪಿಯ ಜಾಮೀನು ವಿಚಾರಣೆಯ ಸಂದರ್ಭದಲ್ಲಿ, ಮೃತ ವಕೀಲರು ನ್ಯಾಯಮೂರ್ತಿ ಸಂಜಯ್ ದ್ವಿವೇದಿ ಅವರ ಮುಂದೆ ಸಂತ್ರಸ್ಥೆಯ ಪರವಾಗಿ ಹಾಜರಾಗಿದ್ದರು ಎಂದು ತಿಳಿದುಬಂದಿದೆ.

ವಕೀಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಮಧ್ಯಪ್ರದೇಶ ಹೈಕೋರ್ಟ್‌ನ ಕ್ಯಾಂಪಸ್‌ನಲ್ಲಿ ವಕೀಲರು ಹಿಂಸಾತ್ಮಕ ಪ್ರತಿಭಟನೆ ನಡೆಸಿದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಕೀಲ ಅನುರಾಗ್ ಸಾಹು ಅವರು ಮಧ್ಯಾಹ್ನ ನ್ಯಾಯಾಲಯದಲ್ಲಿ ಪ್ರಕರಣವನ್ನು ವಾದಿಸಿದ ನಂತರ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ವಕೀಲೆ ಮೇಲೆ ಹಲ್ಲೆ ಪ್ರಕರಣ: ವಕೀಲರ ಸಂಘದಿಂದ ಪ್ರತಿಭಟನೆ

ಘಟನೆಯ ನಂತರ, ಆಕ್ರೋಶಗೊಂಡ ವಕೀಲರ ಗುಂಪು ಹೈಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದೆ. ಅಲ್ಲಿ ಅವರು ಮೃತ ವಕೀಲ ಅನುರಾಗ್‌ ಸಾಹು ವಿರುದ್ಧ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರ ಕೊಠಡಿಯನ್ನು ಧ್ವಂಸಗೊಳಿಸಿದರು ಮತ್ತು ಬೆಂಕಿ ಹಚ್ಚಿದರು ಎಂದೂ ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಮತ್ತು ಕಾನೂನು, ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ (Lathi Charge) ನಡೆಸಬೇಕಾಯಿತು. ಘಟನೆಯಲ್ಲಿ ಕೆಲವು ಪೊಲೀಸರಿಗೆ ಗಾಯಗಳಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ (Superintendent of Police) (ಎಸ್‌ಪಿ) ಸಿದ್ಧಾರ್ಥ್ ಬಹುಗುಣ ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
ಇನ್ನು, ಮೃತ ವಕೀಲರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಸ್‌ಪಿ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
 
ಘಟನೆಯ ವಿವರ ಹೀಗಿದೆ..

ಮಧ್ಯಪ್ರದೇಶದ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ಹೈಕೋರ್ಟ್ ಕಟ್ಟಡದ ಸಮೀಪವಿರುವ ನ್ಯಾಯಾಲಯದಲ್ಲಿ ಸಾಹು ವಿರುದ್ಧ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರ ಕೋಣೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದರು ಎಂದು ಮೂಲಗಳು ಮಾಹಿತಿ ನೀಡಿವೆ. ಕಕ್ಷಿದಾರರನ್ನು ಪ್ರತಿನಿಧಿಸುವ ಇಬ್ಬರು ವಕೀಲರ ನಡುವೆ ವಾಗ್ವಾದ ನಡೆದಿತ್ತು ಎಂದೂ ವರದಿಯಾಗಿದೆ.

ಇದನ್ನೂ ಓದಿ: BBMP Election: ಡಿ.31ರೊಳಗೆ ಪಾಲಿಕೆ ಎಲೆಕ್ಷನ್‌ ನಡೆಸಲು ಹೈಕೋರ್ಟ್‌ ಆದೇಶ
 
ಇದಾದ ಕೆಲವೇ ದಿನಗಳಲ್ಲಿ ಸಂತ್ರಸ್ಥೆಯ ಪರ ವಕೀಲರು ಆತ್ಮಹತ್ಯೆ ಮಾಡಿಕೊಂಡರು.ಸಾವಿನ ಬಗ್ಗೆ ಮಾಹಿತಿ ಪಡೆದ ವಕೀಲರು ಮೃತರ ಶವದೊಂದಿಗೆ ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದರು. ಈ ವೇಳೆ ಪ್ರತಿಭಟನೆ ಭುಗಿಲೆದ್ದಿದೆ. ನಂತರ, ವಕೀಲರು ಗದ್ದಲ ಸೃಷ್ಟಿಸಿ ನ್ಯಾಯಾಲಯವನ್ನು ಧ್ವಂಸಗೊಳಿಸಿದರು. ಭದ್ರತಾ ಅಧಿಕಾರಿಯೊಂದಿಗೆ ಮಾತಿನ ಚಕಮಕಿ ನಡೆಸಿ ನ್ಯಾಯಾಲಯದ ಆವರಣದಲ್ಲಿ ಧರಣಿ ಕುಳಿತಿದ್ದಾರೆ. ಅಲ್ಲದೆ, ಕೆಲವು ವಕೀಲರ ಕೊಠಡಿಗಳಿಗೂ ಬೆಂಕಿ ಹಚ್ಚಲಾಗಿದೆ ಎಂದು ತಿಳಿದುಬಂದಿದೆ.
 
ಅಂತಿಮವಾಗಿ, ಪರಿಸ್ಥಿತಿಯನ್ನು ಹದಗೆಡಿಸಲು ಮಧ್ಯ ಪ್ರದೇಶ ರಾಜ್ಯ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಹಾಗೆ, ಅವರು ವಕೀಲರ ಮೇಲೆ ಲಾಠಿ ಚಾರ್ಜ್‌ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ನಂತರ, ವಕೀಲರನ್ನು ನ್ಯಾಯಾಲಯದಿಂದ ಹೊರನಡೆಯಲಾಯಿತು.

Follow Us:
Download App:
  • android
  • ios