ರೇಣುಕಾಸ್ವಾಮಿ ಕೊಲೆ ಕೇಸ್‌: ದರ್ಶನ್‌, ಗ್ಯಾಂಗ್‌ಗೆ ಈಗ ಜಾಮೀನು ರದ್ದು ಆತಂಕ

ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಾದ ಮಾಡಲು ಸುಪ್ರೀಂ ಕೋರ್ಟ್‌ ಹಿರಿಯ ವಕೀಲರಾದ ಅನಿಲ್ ಸಿ.ನಿಶಾನಿ ಮತ್ತು ಸಿದ್ದಾರ್ಥ್ ಲೂತ್ರಾ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನೊಂದು ವಾರದೊಳಗೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. 

Sandalwood Actor Darshan and Team now Worried about the Cancellation of Bail grg

ಬೆಂಗಳೂರು(ಡಿ.31):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ 'ಚಾಲೆಂಜಿಂಗ್ ಸ್ಟಾರ್' ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗಲಿದ್ದು, ಈ ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 

ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಾದ ಮಾಡಲು ಸುಪ್ರೀಂ ಕೋರ್ಟ್‌ ಹಿರಿಯ ವಕೀಲರಾದ ಅನಿಲ್ ಸಿ.ನಿಶಾನಿ ಮತ್ತು ಸಿದ್ದಾರ್ಥ್ ಲೂತ್ರಾ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನೊಂದು ವಾರದೊಳಗೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಸುಬ್ಬಿನಾ ‘ಮುದ್ದು ಸೊಸೆ’ ಅಂತ ಮುದ್ದು ಮಾಡಿದ್ದರಾ ಮೀನಮ್ಮ?: ಅಮ್ಮ, ಅಕ್ಕನ ಕುಮ್ಮಕ್ಕು.. ದರ್ಶನ್‌ಗೆ ತಂತು ಆಪತ್ತು!

ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್. ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್ ಮತ್ತು ಪ್ರದೂಷ್‌ಗೆ ಹೈಕೋರ್ಟ್ ಡಿ.13 ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ಬಿಡುಗಡೆಯಾಗಿ ನಿಟ್ಟುಸಿರು ಬಿಟ್ಟಿದ್ದ ಆರೋಪಿಗಳಿಗೆ ಇದೀಗ ಹೈಕೋರ್ಟ್ ಜಾಮೀನು ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಮುಖಾಂತರ ಶಾಕ್ ನೀಡಲು ಮುಂದಾಗಿದೆ. 

ವಾರದೊಳಗೆ ಮೇಲ್ಮನವಿ ಸಲ್ಲಿಕೆ: 

ಮೇಲ್ಮನವಿಗೆ ಅನುಮತಿ ಸಿಕ್ಕ ಬೆನ್ನಲ್ಲೇ ತನಿಖಾ ತಂಡ ಹಾಗೂ ಸರ್ಕಾರಿ ವಕೀಲರು ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ಪೂರಕ ದಾಖಲೆಗಳ ಸಿದ್ದತೆ ಆರಂಭಿಸಿದ್ದಾರೆ. ಪ್ರಕರಣದ ದೋಷಾ ರೋಪ ಪಟ್ಟಿಯನ್ನು ಕನ್ನಡದಿಂದ ಇಂಗ್ಲಿಷ್‌ಗೆ ತರ್ಜುಮೆ ಮಾಡಿಸಲು ಮುಂದಾಗಿದ್ದಾರೆ. ಇನ್ನೊಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ಮುಗಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. 

ಪ್ರಕರಣದ ಹಿನ್ನೆಲೆ: 

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಜೂ.8ರ ರಾತ್ರಿ ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ವೊಂದರಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿ ಕೊಲೆ ಮಾಡ ಲಾಗಿತ್ತು. ಜೂ.9ರಂದು ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಆರೋಪಿ ಗಳನ್ನು ಬಂಧಿಸಿದ್ದರು.

ಮನಸ್ತಾಪ ಇದ್ದಿದ್ದು ನಿಜ, ಮತ್ತೆ ದರ್ಶನ್ ಜೊತೆ ಸಿನಿಮಾ ಪಕ್ಕಾ: ಮುನಿಸು ಮರೆತ ದಿನಕರ್ ತೂಗುದೀಪ

ಬಳಿಕ ತನಿಖೆ ಪೂರ್ಣಗೊಳಿಸಿ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆಗಳು ಒಳಗೊಂಡಂತೆ 3000 ಕ್ಕೂ ಅಧಿಕ ಪುಟಗಳ ದೋಷಾ ರೋಪಪಟ್ಟಿಯನ್ನು ಕೋರ್‌ಗೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಎಲ್ಲಾ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಕೆಳಹಂತದ ನ್ಯಾಯಾಲಯ 10 ಮಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಉಳಿದ 7 ಆರೋಪಿಗಳಿಗೆ ಡಿ.13 ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಸುಮಾರು 6 ತಿಂಗಳ ಜೈಲುವಾಸದ ಬಳಿಕ ಎಲ್ಲಾ ಆರೋಪಿಗಳು ಬಿಡುಗಡೆಯಾಗಿದ್ದರು.

• ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಹಲವು ಆರೋಪಿಗಳು 
• ಪ್ರಕರಣದ ಏಳು ಆರೋಪಿಗಳಿಗೆ ಡಿ.13ರಂದು ಷರತ್ತುಬದ್ಧ ಜಾಮೀನು ನೀಡಿದ್ದ ಹೈಕೋರ್ಟ್ 
• ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದಿಂದ ಒಪ್ಪಿಗೆ 
• ಪೊಲೀಸರಿಂದ ಮೇಲ್ಮನವಿಗೆ ಸಿದ್ಧತೆ ಆರಂಭ. ವಾರದೊಳಗೆ ನ್ಯಾಯಾಲಯಕ್ಕೆ ಸಲ್ಲಿಕೆ ಸಾಧ್ಯತೆ

Latest Videos
Follow Us:
Download App:
  • android
  • ios