ನವದೆಹಲಿ(ಜ.25): ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿಗೆ ಕೊನೆಗೂ ರಿಲೀಫ್ ಸಿಕ್ಕಿದ್ದು ಜೈಲುವಾಸ ಕೊನೆಯಾಗಿದೆ.  145 ದಿನಗಳ ಜೈಲುವಾಸ ಕೊನೆಯಾಗಿದ್ದು ಬಿಡುಗಡೆಯಾಗಿದ್ದಾರೆ. ರಾಗಿಣಿ  ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದು ರಾಗಿಣಿ ಆಗಮನಕ್ಕೆ ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸಲು ಅಭಿಮಾನಿಗಳು ಮುಂದಾಗಿದ್ದಾರೆ.

ಇಬ್ಬರು ನಟಿಯರು ಸ್ಯಾಂಡಲ್ ವುಡ್ ಡ್ರಗ್ಸ್ ಕೇಸಿನಲ್ಲಿ ಜೈಲು ಪಾಲಾಗಿದ್ದರು. ನಟಿ ಸಂಜನಾ ಅವರಿಗೆ ಆರೋಗ್ಯ ಸಮಸ್ಯೆ ಕಾರಣ ಇದಕ್ಕೂ ಮೊದಲೇ ಜಾಮೀನು ಸಿಕ್ಕಿತ್ತು.  ನಟಿ ರಾಗಿಣಿ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರಬಹುದು. ಆದರೆ ಮನೆಯಲ್ಲಿ ಡ್ರಗ್ಸ್ ಸಿಕ್ಕಿಲ್ಲ ಎಂದು ವಕೀಲರು ವಾದ ಮಂಡಿಸಿದ್ದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು.

ನನಗೆ ಸಮಯ ಕೊಡಿ..ಮಾತನಾಡಲು ಸಾಕಷ್ಟು ಸಮಯ ಇದೆ.  ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನು ತಿಳಿಸಸುತ್ತೇನೆ ಎಂದು ತುಪ್ಪದ ಬೆಡಗಿ ಹೇಳಿದರು. 

ಸೆ. 04, 2020 ರಂದು ರವಿಶಂಕರ್ ಹೇಳಿಕೆ ಆಧರಿಸಿ ರಾಗಿಣಿಯನ್ನು ಬಂಧಿಸಲಾಗಿತ್ತು. ಅಂದಿನಿಂದ ರಾಗಿಣಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದರು. ಅನೇಕ ಬಾರಿ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದರಾದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಏನಿದು ಪ್ರಕರಣ?:

ಡ್ರಗ್ಸ್‌ ಜಾಲ ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ಸೆ.4 ರಂದು ರಾಗಿಣಿ ಮತ್ತು ಸೆ.8ರಂದು ಸಂಜನಾರನ್ನು ಬಂಧಿಸಿದ್ದರು. ಪೊಲೀಸ್‌ ಕಸ್ಟಡಿ ಮುಗಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ, ಸೆ.28ರಂದು ಜಾಮೀನು ಅರ್ಜಿ ವಜಾಗೊಳಿಸಿತ್ತು.

ಇದರಿಂದ, ರಾಗಿಣಿ ಮತ್ತು ಸಂಜನಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಅರ್ಜಿದಾರರ ವಿರುದ್ಧ ಡ್ರಗ್ಸ್‌ ಪೂರೈಕೆ, ಮಾರಾಟ ಹಾಗೂ ಸೇವನೆಯಂಥಹ ಗಂಭೀರ ಆರೋಪಗಳಿದ್ದು, ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.