Asianet Suvarna News Asianet Suvarna News

ದಿನಕ್ಕೊಂದು ರಾಜ್ಯ, ಗಂಟೆಗೊಂದು ಸಿಮ್, ಸ್ಯಾಂಟ್ರಿ ರವಿ ಬಂಧನ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ!

ದಿನಕ್ಕೊಂದು ಕಾರು, ಗಂಟೆಗೊಂದು ಸಿಮ್, ದಿನಕ್ಕೊಂದು ರಾಜ್ಯಕ್ಕೆ ತರೆಳಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧಿಸಿದ ರೀತಿ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಅರೆಸ್ಟ್ ರೋಚಕ ಮಾಹಿತಿ ಇಲ್ಲಿದೆ.
 

Santro Ravi used multiple sim card and cars to escape says ADGP alok kumar in press meet after arrest ckm
Author
First Published Jan 13, 2023, 5:54 PM IST

ಮೈಸೂರು(ಜ.13): ಅನೈತಿಕ ದಂಧೆಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನ ಅಹಮ್ಮದಾಬಾದ್ ಸಮೀಪದ ಬಂಧಿಸಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ರವಿ ಎರಡನೇ ಪತ್ನಿ ನೀಡಿದ್ದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಮೈಸೂರು ಪೊಲೀಸರು ಚಾಲಾಕಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಸ್ಯಾಂಟ್ರೋ ರವಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸ್ಯಾಂಟ್ರೋ ರವಿ ತಲೆಮರೆಸಿಕೊಳ್ಳಲು ವಿಗ್ ಕಳಚಿದ್ದ. ಶೇವ್ ಮಾಡಿಕೊಂಡ ಇಂದು ಬೆಳಗ್ಗೆ ಮಹಾರಾಷ್ಟ್ರದಿಂದ ಗುಜರಾತ್ ಪ್ರವೇಶ ಮಾಡಿದ್ದ. ಈ ಕುರಿತು ಸುಳಿವು ಪಡೆದ ಮೈಸೂರು ಪೊಲೀಸರು, ಗುಜರಾತ್ ಪೊಲೀಸರ ನೆರವು ಪಡೆದು ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸ್ಯಾಂಟ್ರೋ ರವಿ ತಲೆಮರೆಸಿಕೊಳ್ಳಲು ದಿನಕ್ಕೊಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ. ಎಲ್ಲಿಯೂ ಯಾವುದೇ ಅನುಮಾನ ಬರದಂತೆ ನೋಡಿಕೊಳ್ಳುತ್ತಿದ್ದ. ತನ್ನ ಕಾರಿನ ಜಾಡು ಹಿಡಿದು ಬಂಧಿಸುವ ಸಾಧ್ಯತೆ ಅರಿತಿದ್ದ ಕಾರಣ ಸ್ಯಾಂಟ್ರೋ ರವಿ ಕಾರು ಬದಲಿಸುತ್ತಿದ್ದ. ಇಷ್ಟೇ ಅಲ್ಲ ಪ್ರತಿ ದಿನ ಒಂದೊಂದು ಸಿಮ್ ಕಾರ್ಡ್ ಬಳಕೆ ಮಾಡುತ್ತಿದ್ದ. ಹೀಗಾಗಿ ಸ್ಯಾಂಟ್ರೋ ರವಿಯನ್ನು ಕರೆ ಮೂಲಕ, ಸ್ಯಾಟಲೈಟ್ ಲೋಕೇಶನ್ ಟ್ರೇಸ್ ಮಾಡುವುದು ಕೂಡ ಪೊಲೀಸರಿಗೆ ಸವಾಲಾಗಿತ್ತು. ಇಷ್ಟು ಮಾತ್ರವಲ್ಲ, ದಿನಕ್ಕೊಂದು ರಾಜ್ಯಕ್ಕೆ ತೆರಳುತ್ತಿದ್ದ. ಹೀಗಾಗಿ ಪೊಲೀಸರು ಒಂದು ರಾಜ್ಯದಲ್ಲಿ ಸುಳಿವು ಹಿಡಿದು ಆ ರಾಜ್ಯಕ್ಕೆ ತೆರಳಿದಾಗ ನಿರಾಸೆಯಾಗುತ್ತಿತ್ತು. ಸ್ಯಾಂಟ್ರೋ ರವಿಗೆ ಹೇಗೆ ಪರಾರಿಯಾಗಬೇಕು ಅನ್ನೋದು ಗೊತ್ತಿತ್ತು ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

11 ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್, ಗುಜರಾತ್‌ನಲ್ಲಿ ಬಂಧಿಸಿದ ಮೈಸೂರು ಪೊಲೀಸ್!

ರಾಯಚೂರು ಎಸ್‌ಪಿ ನಿನ್ನೆ ಸ್ಯಾಂಟ್ರೋ ರವಿ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದರು. ಈ ಸುಳಿವು ಆಧರಿಸಿ ಗುಜರಾತ್‌ನಲ್ಲಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ಗುಜರಾತ್ ಕೋರ್ಟ್‌ಗೆ ಸ್ಯಾಂಟ್ರೋ ರವಿಯನ್ನು ಹಾಜರು ಪಡಿಸಲಾಗುತ್ತದೆ. ಕೋರ್ಟ್‌ನಿಂದ ಟ್ರಾನ್ಸಿಸ್ಟ್ ಆರ್ಡರ್ ಪಡೆದ ಬಳಿಕ ಬೆಂಗಳೂರಿಗೆ ಕರೆ ತರಲಾಗುತ್ತದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಸ್ಯಾಂಟ್ರೋ ರವಿ, ಕೇರಳ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಓಡಾಡಿದ್ದ. ಸ್ಯಾಂಟ್ರೋ ರವಿ ಬಂಧನದಲ್ಲಿ ಮೈಸೂರು ಪೊಲೀಸರ ಜೊತೆಗೆ ಮಂಡ್ಯ. ರಾಮನಗರ, ರಾಯಚೂರು ಎಸ್‌ಪಿ ಪಾತ್ರ ಮಹತ್ವದ್ದಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ಸ್ಯಾಂಟ್ರೋ ರವಿಯನ್ನು ಬಂಧಿಸಿದ ಪೊಲೀಸರಿಗೆ ಬಹುಮಾನ ಘೋಷಣೆ ಮಾಡಲಾಗಿದೆ ಎಂದರು.

ಸ್ಯಾಂಟ್ರೋ ರವಿ ಬಿಜೆಪಿಯಲ್ಲಿ ಇದ್ರೋ ಇಲ್ವೋ ನನ್ನ ಬಳಿ ಮಾಹಿತಿ ಇಲ್ಲ: ಸಿಟಿ ರವಿ

ಸ್ಯಾಂಟ್ರೋ ರವಿ ಮೇಲೆ 28 ಪ್ರಕರಣಗಳಿವೆ. ಇದರಲ್ಲಿ ಯಾವ ಪ್ರಕರಣಕ್ಕೆ ಚಾರ್ಜ್‌ಶೀಟ್ ಆಗಿದೆ, ಯಾವ ಪ್ರಕರಣಕ್ಕೆ ಆಗಿಲ್ಲ ಅನ್ನೋದು ಪರಿಶೀಲಿಸುತ್ತೇವೆ. ಸದ್ಯ 2ನೇ ಪತ್ನಿ ನೀಡಿದ ದೂರಿನ ಆಧಾರದಲ್ಲಿ ತನಿಖೆ ನಡೆಯಲಿದೆ. ಇದರ ಜೊತೆಗೆ ಹುಡುಗಿಯರ ಸಪ್ಲೈ ಸೇರಿದಂತೆ ಅನೈತಿಕ ದಂಧೆ ಕುರಿತು ವಿಚಾರಣೆಯೂ ನಡೆಯಲಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
 

Follow Us:
Download App:
  • android
  • ios