ಕಾಕನೂರಿನ ಎಸ್‌ಬಿಐ ಬ್ಯಾಂಕ್‌ನಲ್ಲಿ ಗ್ಯಾಸ್ ಕಟ್ಟರ್ ಬಳಸಿ ದರೋಡೆಕೋರರು 10 ಲಕ್ಷಕ್ಕೂ ಹೆಚ್ಚು ಹಣ ದೋಚಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳಿಗೆ ಪೇಂಟ್ ಸ್ಪ್ರೇ ಮಾಡಿ ದೃಶ್ಯಗಳನ್ನು ಮರೆಮಾಚಿದ ಕಳ್ಳರು ಲಾಕರ್‌ಗಳನ್ನು ಗುರಿಯಾಗಿಸಿಕೊಂಡಿದ್ದರು. ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಬಾಗಲಕೋಟೆ (ಸೆ.3): ಜಿಲ್ಲೆಯ ಕಾಕನೂರು ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಕೋರರು ಗ್ಯಾಸ್ ಕಟರ್ ಬಳಸಿ ಬ್ಯಾಂಕ್‌ನ ಹಿಂಭಾಗದ ಶಟರ್ ಕೊರೆದು ಒಳನುಗ್ಗಿ, ಅಂದಾಜು 10 ಲಕ್ಷಕ್ಕೂ ಅಧಿಕ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಳ್ಳರು ದರೋಡೆಗೆ ಮೊದಲು ಬ್ಯಾಂಕ್‌ನ ಸಿಸಿಟಿವಿ ಕ್ಯಾಮೆರಾಗಳಿಗೆ ಪೇಂಟ್ ಸ್ಪ್ರೇ ಮಾಡಿ ದೃಶ್ಯಗಳನ್ನು ಮರೆಮಾಚಿದ್ದಾರೆ. ಮೂರು ಲಾಕರ್‌ಗಳನ್ನು ಗುರಿಯಾಗಿಸಿದ್ದ ಕಳ್ಳರು, ಒಂದು ಲಾಕರ್‌ನಿಂದ ಹಣವನ್ನು ಕದ್ದು ಯಶಸ್ವಿಯಾಗಿ ಪರಾರಿಯಾಗಿದ್ದಾರೆ. ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಬಾದಾಮಿ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯಲ್ ಸ್ಥಳಕ್ಕೆ ಭೇಟಿ ನೀಡಿ, ಬ್ಯಾಂಕ್ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರು ಈ ಕೃತ್ಯವನ್ನು ಪ್ರೊಫೆಷನಲ್ ಕಳ್ಳರ ತಂಡವೇ ನಡೆಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿ ಕಲೆಹಾಕಲು ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಈ ದರೋಡೆಯು ಸ್ಥಳೀಯರಲ್ಲಿ ಆತಂಕವನ್ನುಂಟುಮಾಡಿದ್ದು, ಬ್ಯಾಂಕ್‌ಗಳ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸಲು ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಘಟನೆಯಿಂದ ಬ್ಯಾಂಕ್ ಗ್ರಾಹಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು