ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ದಾರುಣ ಸಾವು!
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿಸಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯುತ್ ತಗುಲಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್ ಕಾವಲ್ ಬಳಿ ನಡೆದಿದೆ.
ತುಮಕೂರು (ಆ.15): ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿಸಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯುತ್ ತಗುಲಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್ ಕಾವಲ್ ಬಳಿ ನಡೆದಿದೆ.
ಹೇಮಂತ್(8) ಮೃತ ಬಾಲಕ. ಹೆಚ್ ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ. ಇಂದು 78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಬೆಳಗ್ಗೆಯೇ ರೆಡಿಯಾಗಿ ಸಂಭ್ರಮದಿಂದ ಶಾಲೆಗೆ ತೆರಳಿದ್ದ ಬಾಲಕ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ ದುರಂತ ನಡೆದುಹೋಗಿದೆ. ಬಾಲಕನ ಕುಟುಂಬಸ್ಥರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮಗನನ್ನ ಮುಂಜಾನೆ ಎಬ್ಬಿಸಿ ಸ್ವಾತಂತ್ರ್ಯೋತ್ಸವಕ್ಕೆ ಸಿಂಗರಿಸಿ ಕಳಿಸಿದ್ದರು. ಮನೆಗೆ ಬಂದ ಮಗನ ಮೃತ ಶರೀರ ಕಂಡು ಪೋಷಕರ ಅಕ್ರಂದನ ಮುಗಿಲು ಮುಟ್ಟಿತು.
ರಾಯಚೂರು: ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಮಣ್ಣು ಹಾಕಿದ ಜೆಸಿಬಿ ಚಾಲಕ, ಸ್ಥಳದಲ್ಲೇ ಸಾವು..!
ಕೆಇಬಿ ನಿರ್ಲಕ್ಷ್ಯ:
ರಸ್ತೆ ಭಾಗದಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದ ವೈರ್‌ಗೆ ವಿದ್ಯುತ್ ಪ್ರವಹಿಸಿದೆ ಬಾಲಕ ಕಂಬದ ಸಮೀಪ ತೆರಳುವಾಗ ಸ್ಪರ್ಶಿಸಿರುವ ಬಾಲಕ ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿರುವ ವಿದ್ಯಾರ್ಥಿ. ಘಟನೆ ಬಳಿಕ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಲವು ಬಾರಿ ವಿದ್ಯುತ್ ಕಂಬ ಸರಿಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರೂ ಕೆಇಬಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಕೆಇಬಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿದ್ಯಾರ್ಥಿ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಕೆಇಬಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.