ಮನೆಯಲ್ಲಿ ಕೌಟುಂಬಿಕ ಕಲಹ ವಿಚಾರವಾಗಿ ಗುರುವಾರ ರಾತ್ರಿ ದಂಪತಿ ಮಧ್ಯೆ ಜಗಳವಾಗಿದೆ. ಆಗ ಕೋಪಗೊಂಡು ಪತ್ನಿ ಚಿಕ್ಕತಾಯಿ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ನಾಗರತ್ನಂ ಹತ್ಯೆಗೈದು ಪರಾರಿಯಾಗಿದ್ದ. ಈ ತನಿಖೆ ನಡೆಸಿದ ಪೊಲೀಸರು, ಘಟನೆ ನಡೆದ ಕೆಲವೇ ತಾಸಿನೊಳಗೆ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು(ಜು.14): ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದ ಖಾಸಗಿ ಶಾಲೆಯ ಭದ್ರತಾ ಕಾವಲುಗಾರನೊಬ್ಬನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆರೆಕಲ್ಲು ನಿವಾಸಿ ಚಿಕ್ಕತಾಯಿ (43) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ನಾಗರತ್ನಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಕೌಟುಂಬಿಕ ಕಲಹ ವಿಚಾರವಾಗಿ ಗುರುವಾರ ರಾತ್ರಿ ದಂಪತಿ ಮಧ್ಯೆ ಜಗಳವಾಗಿದೆ. ಆಗ ಕೋಪಗೊಂಡು ಪತ್ನಿ ಚಿಕ್ಕತಾಯಿ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ನಾಗರತ್ನಂ ಹತ್ಯೆಗೈದು ಪರಾರಿಯಾಗಿದ್ದ. ಈ ತನಿಖೆ ನಡೆಸಿದ ಪೊಲೀಸರು, ಘಟನೆ ನಡೆದ ಕೆಲವೇ ತಾಸಿನೊಳಗೆ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ: ವೇಣುಗೋಪಾಲ್‌ ಪತ್ನಿ ಪೂರ್ಣಿಮಾ ಆರೋಪ

ತಮಿಳುನಾಡು ರಾಜ್ಯದ ವೆಲ್ಲೂರು ಜಿಲ್ಲೆಯ ನಾಗರತ್ನಂ, ಕಾಮಾಕ್ಷಿಪಾಳ್ಯ ಸಮೀಪ ಖಾಸಗಿ ಶಾಲೆಯಲ್ಲಿ ಭದ್ರತಾ ಕಾವಲುಗಾರನಾಗಿದ್ದರು. ತಮ್ಮ ಪತ್ನಿ ಹಾಗೂ ಮಗನ ಜತೆ ನೆಲೆಸಿದ್ದ ಆತ, ವಿಪರೀತ ಮದ್ಯ ವ್ಯಸನಿಯಾಗಿದ್ದ. ಪ್ರತಿ ದಿನ ಮದ್ಯ ಸೇವಿಸಿ ಬಂದು ಮನೆಯಲ್ಲಿ ನಾಗರತ್ನಂ ಗಲಾಟೆ ಮಾಡುತ್ತಿದ್ದ. ಇದೇ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪ ಬೆಳೆದಿತ್ತು. ಎಂದಿನಂತೆ ಗುರುವಾರ ರಾತ್ರಿ ಸಹ ಕುಡಿದು ಮನೆಗೆ ಬಂದಿದ್ದ ನಾಗರತ್ನಂ, ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜತೆ ಜಗಳ ಶುರು ಮಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಚಿಕ್ಕತಾಯಿ ಕೊಲೆಯಲ್ಲಿ ಗಲಾಟೆ ಅಂತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.