ಬೆಂಗಳೂರು: 15 ಕೋಟಿ ಮೌಲ್ಯದ ಚಿನ್ನ ದೋಚಿದ ಸೆಕ್ಯುರಿಟಿ ಗಾರ್ಡ್‌

ವಿಜಯನಗರದ ಹೊಸಹಳ್ಳಿ ಎಕ್ಸ್‌ಟೆನ್ಸನ್ ನಿವಾಸಿ ಸುರೇಂದ್ರ ಕುಮಾರ್‌ಜೈನ್ ಅವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ನೇಪಾಳ ಮೂಲದ ಸೆಕ್ಯೂರಿಟಿ ಗಾರ್ಡ್ ನಮ್ರಾಜ್ ಬಾತ ವಿರುದ್ಧ ಪ್ರಕರಣ ದಾಖಲಿಸಿ, ಆತನ ಬಂಧನಕ್ಕೆ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅಧಿಕಾರಿಗಳು 

Security guard robbed of 15 crore gold in Bengaluru grg

ಬೆಂಗಳೂರು(ನ.09):  ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕಾವಲಿಗೆ ಇದ್ದ ನೇಪಾಳ ಮೂಲದ ಸೆಕ್ಯೂರಿಟಿ ಗಾರ್ಡ್ ₹40.80 ಲಕ್ಷ ನಗದು ಹಾಗೂ ₹14.75 ಕೋಟಿ 5 18 4.2. 470 0 ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ವಿಜಯನಗರದ ಹೊಸಹಳ್ಳಿ ಎಕ್ಸ್‌ಟೆನ್ಸನ್ ನಿವಾಸಿ ಸುರೇಂದ್ರ ಕುಮಾರ್‌ಜೈನ್ ಅವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ನೇಪಾಳ ಮೂಲದ ಸೆಕ್ಯೂರಿಟಿ ಗಾರ್ಡ್ ನಮ್ರಾಜ್ ಬಾತ ವಿರುದ್ಧ ಪ್ರಕರಣ ದಾಖಲಿಸಿ, ಆತನ ಬಂಧನಕ್ಕೆ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಗಳೂರು: ಪಾರಿವಾಳ ಹಿಡಿವ ಸೋಗಿನಲ್ಲಿ ಮನೆ ದೋಚುತ್ತಿದ್ದ ಖತರ್ನಾಕ್‌ ಖದೀಮ ಅರೆಸ್ಟ್‌

ಏನಿದು ಪ್ರಕರಣ?: 

ದೂರುದಾರ ಸುರೇಂದ್ರ ಕುಮಾರ್ ಜೈನ್ ಮಾಗಡಿ ರಸ್ತೆಯ ವಿದ್ಯಾರಣ್ಯ ನಗರದಲ್ಲಿ ಸುಮಾರು 30 ವರ್ಷಗಳಿಂದ ಅರಿಹಂತ್ ಜ್ಯುವೆಲ್ಲರಿ ಅಂಗಡಿ ಹೊಂದಿದ್ದಾರೆ. ಇವರ ಅಂಗಡಿಯಲ್ಲಿ 7 ಜನ ಹುಡುಗರು ಕೆಲಸ ಮಾಡಿಕೊಂಡಿದ್ದು, ಈ ಪೈಕಿ 6 ಮಂದಿ ಅವರ ಸ್ವಂತ ಮನೆಗಳಲ್ಲಿ ವಾಸವಾಗಿದ್ದಾರೆ. 

ಈ ಜ್ಯುವೆಲ್ಲರಿ ಅಂಗಡಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ ನೇಪಾಳ ಮೂಲದ ನಮ್ರಾಜ್‌ಗೆ ಮನೆ ಇಲ್ಲದ ಕಾರಣ ಮಾಲೀಕ ಸುರೇಂದ್ರ ಕುಮಾರ್‌ಜೈನ್ ಅವರ ಮನೆಯ ಪಾರ್ಕಿಂಗ್ ಸ್ಥಳದಲ್ಲಿರುವ ಸೆಕ್ಯೂರಿಟಿ ರೂಮ್‌ನಲ್ಲಿ 6 ತಿಂಗಳಿನಿಂದ ಪತ್ನಿ ಜತೆಗೆ ವಾಸವಿದ್ದ. ಅಂತೆಯೇ ಮನೆಯ ತಾರಸಿಯ ಗಿಡಗಳಿಗೆ ನೀರು ಹಾಕುವುದು ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಮಾಲೀಕರು ಗುಜರಾತ್‌ಗೆ ತೆರಳಿದ್ದಾಗ ಕಳವು ಮಾಲೀಕ ಸುರೇಂದ್ರ ಕುಮಾರ್‌ಜೈನ್ ದೇವರ ಜಾತ್ರೆ ಪ್ರಯುಕ್ತ ನ.1ರಂದು ಕುಟುಂಬದ ಜತೆ ಗುಜರಾತ್‌ಗೆ ತೆರಳಿದ್ದರು. ಜಾತ್ರೆ ಮುಗಿಸಿ ನ.7ರಂದು ಮುಂಜಾನೆ ಮನೆಗೆ ವಾಪಾಸಾದಾಗ ಮನೆಯಲ್ಲಿದ್ದ ನಗದು, ಚಿನ್ನಾಭರಣ, ಚಿನ್ನದ ಬಿಸ್ಕತ್ ಸೇರಿ ಒಟ್ಟು ಸುಮಾರು ₹15.15 ಕೋಟಿ ಮೌಲ್ಯದ ಮೌಲ್ಯದ ವಸ್ತುಗಳು ಕಳುವಾಗಿರುವುದು ಕಂಡು ಬಂದಿದೆ. 

ಬಳಿಕ ಸೆಕ್ಯೂರಿಟಿ ಗಾರ್ಡ್‌ನನ್ನು ಹುಡುಕಿದಾಗ ಆತ ಪತ್ತೆಯಾಗಿಲ್ಲ. ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ ಆಫ್ ಬಂದಿದೆ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಬಳಸಿಕೊಂಡು ಸೆಕ್ಯುರಿಟಿ ಗಾರ್ಡ್ ನಮ್ರಾಜ್ ನಗದು, ಚಿನ್ನಾಭರಣ ಕಳವು ಮಾಡಿ ಪತ್ನಿ ಜತೆಗೆ ಪರಾರಿಯಾಗಿದ್ದಾನೆ. ಈತನನ್ನು ಪತ್ತೆಹಚ್ಚಿ ಕಳವು ಮಾಲು ಹುಡುಕಿ ಕೊಡುವಂತೆ ಸುರೇಂದ್ರ ಜೈನ್ ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ.

Latest Videos
Follow Us:
Download App:
  • android
  • ios