ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಾಗೆ ಜಾಮೀನು
ಸಿಎಎ ವಿರುದ್ಧ ಪ್ರತಿಭಟನೆ/ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಾಗೆ ಜಾಮೀನು/ ಪೊಲೀಸರು ತನಿಖೆ ಪೂರ್ಣಗೊಳಿಸದ ಕಾರಣಕ್ಕೆ ಜಾಮೀನು/ ಲಾಕ್ ಡೌನ್ ಗೂ ಮುನ್ನವೇ ಬಂಧನವಾಗಿತ್ತು
ಬೆಂಗಳೂರು (ಜೂ 11) ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ದೇಶದ್ರೋಹ ಪ್ರಕರಣದಲ್ಲಿ ಬಂಧಿಯಾಗಿದ್ದ ಅಮೂಲ್ಯಾ ಲಿಯೋನಾಗೆ ಜಾಮೀನು ಸಿಕ್ಕಿದೆ.
ಷರತ್ತುಬದ್ದ ಜಾಮೀನು ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸದ ಕಾರಣ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ. ಜೂ.10 ರಂದು ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು
ಬುದ್ಧಿ ಹೇಳಿದರೂ ಕೇಳದೇ ಜೈಲು ಸೇರಿದ್ದ ಅಮೂಲ್ಯಾ
ಜಾಮೀನು ನೀಡಿದರೆ ಕೃತ್ಯ ಪುನರಾವರ್ತನೆ ಸಾಧ್ಯತೆ ಇದ್ದು ಸಮಾಜದಲ್ಲಿ ಅಶಾಂತಿ ಮೂಡಿಸುವ ಸಾಧ್ಯತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿತ್ತು. ಪೊಲೀಸರು ತನಿಖೆ ಪೂರ್ಣಗೊಳಿಸದ ಹಿನ್ನೆಲೆ ತಾಂತ್ರಿಕ ಕಾರಣದಿಂದ ಜಾಮೀನು ಸಿಕ್ಕಿದೆ. ಜಾಮೀನಿನ ಅರ್ಜಿ ವಿಚಾರಣೆ ನಡೆಸಿದ್ದ ಸಿವಿಲ್ ಮತ್ತು ಸೆಶನ್ಸ್ ಕೋರ್ಟ್, ವಿದ್ಯಾರ್ಥಿಯಾಗಿರುವ 19 ವರ್ಷದ ಅಮೂಲ್ಯಾ ಬಿಡುಗಡೆಯಾದರೆ ತಲೆಮರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿತ್ತು.