ಬೆಳಗಾವಿ, (ಅ.02): ಬೊಲೆರೋ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಮತ್ತು ಧಾರವಾಡ ಹೆದ್ದಾರಿಯಲ್ಲಿ ಸಂಭವಿಸಿದೆ.

ಧಾರವಾಡದ ಮೊರಬ ಗ್ರಾಮಕ್ಕೆ ಕೂಲಿಗಾಗಿ ತೆರಳಿದ್ದ ಕೂಲಿ ಕಾರ್ಮಿಕರು ಮರಳುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ  ಮಹಿಳೆಯರು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಂಧಿ,ಶಾಸ್ತ್ರಿ ಸ್ಮರಿಸಿದ ಭಾರತ, ಬಾಬ್ರಿ ಧ್ವಂಸದ ಹಿಂದಿತ್ತಾ ಪಾಕ್ ತಂತ್ರ? ಅ.2ರ ಟಾಪ್ 10 ಸುದ್ದಿ! 

ಬೆಳಗಾವಿ- ಧಾರವಾಡ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಚಿಂಚನೂರು ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಎರಡೂ ವಾಹನಗಳು ಜಖಂಗೊಂಡಿವೆ. ಟಾಟಾ ಏಸ್​​ನಲ್ಲಿದ್ದವರೆಲ್ಲ ಕೂಲಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಈ ಬಗ್ಗೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಪಿ. ಅಮರನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.