ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಶಿವನಗೌಡ ಎಂಬಾತನನ್ನು ಬಂಧಿಸಲಾಗಿದೆ. ಶಾಲಾ ಆಡಳಿತದ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಯಚೂರು (ಫೆ.5): ಖಾಸಗಿ ಶಾಲೆಯ 2ನೇ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ.
ಶಿವನಗೌಡ ಬಂಧಿತ ಆರೋಪಿ. ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕಾಮುಕ. ಸದ್ಯ ಬಾಲಕಿಯನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಘಟನೆ ನಡೆದಿದ್ದು ಹೇಗೆ?
ಪ್ರತಿದಿನ ಊರಿನಿಂದ ಶಾಲೆಗೆ ಸ್ಕೂಲ್ ಬಸ್‌ನಲ್ಲಿ ತೆರಳುತ್ತಿದ್ದ ಬಾಲಕಿ. ಬಂಧಿತ ಆರೋಪಿ ಶಿವನಗೌಡ ಎಂಬಾತ ಅದೇ ಊರಿನವನಾಗಿದ್ದು ಬಾಲಕಿಗೆ ಪರಿಚಿತನಾಗಿದ್ದಾನೆ. ಮಧ್ಯಾನ ಶಾಲೆಗೆ ಬರುತ್ತಿದ್ದ ಆರೋಪಿ ಊಟದ ಸಮಯಕ್ಕೆ ಬಾಲಕಿಯನ್ನ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಹೊರಗಡೆ ಕರೆದೊಯ್ದ ವೇಳೆ ಆರೋಪಿ ಶಿವನಗೌಡ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ; ಬಾಲಕಿ ಕೆನ್ನೆಗೆ ಅನ್ನದ ಚಮಚದಿಂದ ಬರೆ ಹಾಕಿದ ಸಹಾಯಕಿ!
ಶಾಲೆ ವಿರುದ್ಧ ಪೋಷಕರು ಆಕ್ರೋಶ:

ಯಾವುದೇ ಮಾಹಿತಿ ನೀಡದೆ ಅಪರಿಚಿತರೊಂದಿಗೆ ಮಗುವನ್ನು ಕಳಿಸಿದ ಶಾಲಾ ವ್ಯವಸ್ಥಾಪಕರ ವಿರುದ್ಧ ಮಗುವಿನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ಸಂಬಂಧ ಮಾನ್ವಿಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಜೊತೆಗೆ ಶಾಲಾ ವ್ಯವಸ್ಥಾಪಕರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರು. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಹಾಗೂ ಬಾಲಕಿ ದಾಖಲಾಗಿರುವ ಆಸ್ಪತ್ರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಣೆ ನಡೆಸಿದ್ದಾರೆ.
