ಬೆಂಗಳೂರು(ಆ.05): ವೈದ್ಯಕೀಯ ವಿದ್ಯಾರ್ಥಿಯೊಬ್ಬ ಯುವತಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ದೈಹಿಕ ಸಂಪರ್ಕ ಹೊಂದುವಂತೆ ಯುವತಿಗೆ ಕಿರುಕುಳ ನೀಡುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಮಾರತ್ತಹಳ್ಳಿ ನಿವಾಸಿ 20 ವರ್ಷದ ಯುವತಿ ಕೊಟ್ಟ ದೂರಿನ ಮೇರೆಗೆ ಮೈಸೂರು ಮೂಲದ ವೈದ್ಯಕೀಯ ವಿದ್ಯಾರ್ಥಿ ರಾಬರ್ಟ್‌ ರೋಷನ್‌ ಎಂಬಾತನ ವಿರುದ್ಧ ವೈಟ್‌ಫೀಲ್ಡ್‌ ಸಿಇಎನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ರಾಬರ್ಟ್‌ ಕೆಲ ತಿಂಗಳ ಹಿಂದೆ ಯುವತಿಯನ್ನು ಇನ್‌ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ತಾನು ವೈದ್ಯಕೀಯ ವಿದ್ಯಾರ್ಥಿ ಎಂದು ಹೇಳಿಕೊಂಡಿದ್ದ. ಹೀಗೆ, ಪ್ರತಿದಿನ ಯುವತಿ ಚಾಟಿಂಗ್‌ ಮಾಡುತ್ತಿದ್ದ. ಇಬ್ಬರ ನಡುವಿನ ಪರಿಚಯ ಸ್ನೇಹಕ್ಕೆ ತಿರುಗಿದ್ದು, ಮೊಬೈಲ್‌ ಸಂಖ್ಯೆ ವಿನಿಮಯ ಮಾಡಿಕೊಂಡಿದ್ದರು.

ಪತಿಯಿಂದ ಪತ್ನಿಯ ಕೊಲೆ: ತಾಯಿಯ ಶವದ ಪಕ್ಕದಲ್ಲೇ ರಾತ್ರಿ ಕಳೆದ ಮಕ್ಕಳು

ಮಾರ್ಚ್‌ನಲ್ಲಿ ಬೆಂಗಳೂರಿಗೆ ಬಂದಿದ್ದ ರಾಬರ್ಟ್‌, ಯುವತಿ ಜತೆ ಸುತ್ತಾಡಿದ್ದು, ಸಲುಗೆಯಿಂದ ವರ್ತಿಸಿದ್ದ. ಯುವತಿ ಜತೆ ಸಲುಗೆಯಿಂದ ಇದ್ದ ಫೋಟೋಗಳನ್ನು ಆರೋಪಿ ಚಿತ್ರಿಸಿಕೊಂಡಿದ್ದ. ಕೆಲ ದಿನಗಳ ಬಳಿಕ ಆ ಫೋಟೋಗಳನ್ನು ಆರೋಪಿ ಯುವತಿಗೆ ರವಾನಿಸಿ, ಅಶ್ಲೀಲವಾಗಿ ಚಾಟಿಂಗ್‌ ಮಾಡಿದ್ದ. ಇದನ್ನು ಪ್ರಶ್ನಿಸಿದ ಯುವತಿಗೆ, ತನ್ನ ಜತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದ. ಅಲ್ಲದೆ, ಸಹೋದರಿಯ ಖಾಸಗಿ ಫೋಟೋಗಳನ್ನು ಕಳುಹಿಸುವಂತೆ ಪೀಡಿಸಿದ್ದ. ಇತ್ತೀಚೆಗೆ ಆತನ ಕಿರುಕುಳ ಹೆಚ್ಚಾಗಿದ್ದು, ಠಾಣೆಗೆ ಬಂದು ದೂರು ಕೊಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.