ಶಾಲೆಯ ಮುಖ್ಯ ಶಿಕ್ಷಕನಿಂದಲೇ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಗುರುಮಠಕಲ್ ಠಾಣೆಯಲ್ಲಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲಾಗಿದೆ.

ಯಾದಗಿರಿ (ಜ.12): ಶಾಲೆಯ ಮುಖ್ಯ ಶಿಕ್ಷಕನಿಂದಲೇ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಗುರುಮಠಕಲ್ ಠಾಣೆಯಲ್ಲಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲಾಗಿದೆ.

Add Asianetnews Kannada as a Preferred SourcegooglePreferred

ಹಣಮೇಗೌಡ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ. ಆರೋಪಿ ಯಾದಗಿರಿ ಜಿಲ್ಲೆಯ ಸರಕಾರಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿದ್ದಾನೆ. ಕಳೆದ 4 ವರ್ಷದಿಂದ ಶಾಲೆಯ ಮುಖ್ಯ ಶಿಕ್ಷಕನಾಗಿರುವ ಆರೋಪಿ ಹಣಮೇಗೌಡ. ಶಾಲೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತಿಸುವುದು, ಲೈಂಗಿಕ ಕಿರುಕುಳ ನೀಡುವುದು ಕೆಲಸ ಮಾಡಿಕೊಂಡ ಕಾಮುಕ. ಹಲವು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಆರೋಪ ಕೇಳಿಬಂದಿದೆ. 

ದಿನನಿತ್ಯ ಕುಡಿದು ಬಂದು ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕಾಮುಕ ಶಿಕ್ಷಕನ ವರ್ಗಾವಣೆಗೆ ಗ್ರಾಮಸ್ಥರು ಪಟ್ಟು!

ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಮುಖ್ಯ ಶಿಕ್ಷಕ ಹಣಮೇಗೌಡನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರೋ ಸಿಇಓ ಗರೀಮಾ ಪನ್ವಾರ್. ಬಳಿಕ ನಾಲ್ಕು ಜನ ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ಶಾಲೆ ಭೇಟಿ ನೀಡಿ ಮಕ್ಕಳ ವಿಚಾರಣೆ ನಡೆಸಿದ್ದರು. ಅಧಿಕಾರಿಗಳ ಭೇಟಿ ವೇಳೆ ಶಾಲೆಯ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ನೀಡಿದ್ದ ಮಾಹಿತಿ ನೀಡಿದ್ದಾರೆ. ಪರಿಶೀಲನೆ ವರದಿಯು ನಿಜವೆಂದು ತಿಳಿದು ಯಾದಗಿರಿ ಡಿಡಿಪಿಐ ಮಂಜುನಾಥ ಎಚ್‌ಟಿ ಅವರು ಪೋಕ್ಸೊ ಅಡಿ ಶಿಕ್ಷಕ ಹಣಮೇಗೌಡ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ವಿಚಾರಣೆ ನಡೆಸುತ್ತಿರುವ ಪೊಲೀಸರು.

ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಹ್ಯವಾಗಿ ಮುಟ್ತಿದ್ದ ಕಾಮುಕ ಶಿಕ್ಷಕ: ಪೋಷಕರಿಂದ ಧರ್ಮದೇಟು!