ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಕುಸಿದು ನಾಲ್ವರ ದುರ್ಮರಣ
ಬೆಂಗಳೂರಿನ ಹೊಸಕೋಟೆಯಲ್ಲಿ ಶೆಡ್ ಕುಸಿದುಬಿದ್ದು ಉತ್ತರ ಭಾರತದ ಕೂಲಿ ಕಾರ್ಮಿಕರ ದುರ್ಮರಣ., ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದೆ.
ಹೊಸಕೋಟೆ (ಜು.21) : ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಕುಸಿದು ಕಾರ್ಮಿಕರ ದುರ್ಮರಣ..ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದೆ. ಕೆಲ ವರ್ಷಗಳ ಹಿಂದೆ ಉತ್ತರ ಭಾರತದಿಂದ ಬೆಂಗಳೂರಿಗೆ ವಲಸೆ ಬಂದಿರುವ ಕೂಲಿ ಕಾರ್ಮಿಕರಾಗಿದ್ದು, ಕಟ್ಟಡ ನಿರ್ಮಾಣದಲ್ಲಿ ಕೆಲಸ ಮಾಡುತ್ತಿದ್ದರು.
ಸೌಪರ್ಣಿಕಾ ಅಪಾರ್ಟ್ಮೆಂಟ್ ಬಳಿ ಕೂಲಿ ಕಾರ್ಮಿಕರು ತಂಗಲು ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ಕುಸಿದು ಬಿದ್ದಿದೆ. ರಾತ್ರಿ ಮಳೆ ಸುರಿದಿದ್ದರಿಂದ ಶೆಡ್ ಕುಸಿದುಬಿದ್ದಿದೆ. ಈ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೃತರೆಲ್ಲರೂ ಉತ್ತರ ಭಾರತದ ಮೂಲದವರು ಎಂದು ತಿಳಿದುಬಂದಿದೆ. ಬೆಳಗಿನ ಜಾವ ಸುಮಾಎರು 3-00 ಗಂಟೆ ವೇಳೆ ಶೆಡ್ ಕುಸಿದು ಬಿದ್ದಿದೆ. ಈ ವೇಳೆ ಕಾರ್ಮಿಕರೆಲ್ಲರೂ ಗಾಢ ನಿದ್ದೆಯಲ್ಲಿದ್ದುದರಿಂದ ಗೋಡೆ ಕುಸಿದು ಬಿದ್ದಾಗ ತಕ್ಷಣಕ್ಕೆ ಶೆಡ್ ನಿಂದ ಹೊರಬರಲು ಸಾಧ್ಯವಾಗಿಲ್ಲ. ನಿನ್ನೆ ರಾತ್ರಿಯಿಡೀ ಮಳೆ ಸುರಿದಿರುವುದರಿಂದ ಶೆಡ್ ಕುಸಿದು ಬಿಳಲು ಕಾರಣ ಎನ್ನಲಾಗಿದೆ.
ಅರುಣಾಚಲ ಪ್ರದೇಶದ ಕುಮಿ ನದಿಯಲ್ಲಿ ಮುಳುಗಿ 19 ಕಾರ್ಮಿಕರ ಸಾವು?
ಬಹುಮಹಡಿಯ ನಿರ್ಮಾಣ ಹಂತದ ಕಟ್ಟಡದಲ್ಲಿದ್ದು, ಕೂಲಿಕಾರ್ಮಿಕರಿಗೆ ನಿರ್ಮಿಸಿದ್ದ ಶೆಡ್ ಮೇಲೆ ಪಕ್ಕದ ಹುಡಾನ್ ಕಂಪನಿಯ ವೇರ್ ಹೌಸ್ ಗೋಡೆ ಬಿದ್ದಿದೆ. ಈ ದುರಂತದಲ್ಲಿ 4 ಜನ ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತಪಟ್ಟವರು, ಮನೋಜ್ ಕುಮಾರ್ ಸದಯ್ (35), ರಾಮ್ ಕುಮಾರ್ ಸದಯ್ (25), ರಾಮ್ ಕುಮಾರ್ ಸದಯ್ (25), ನಿತೀಶ್ ಕುಮಾರ್ ಸದೆಯ (22) ಮೃತಪಟ್ಟ ದುರ್ದೈವಿಗಳು. ಇವರೆಲ್ಲರೂ ಬಿಹಾರ ಮೂಲದ ಕಾರ್ಮಿಕರಾಗಿದ್ದಾರೆ.
ಈ ದುರ್ಘಟನೆಯಲ್ಲಿ ಗಂಭೀರ ಗಾಯಗೊಂಡವರು, ಸುನಿಲ್ ಮಂಡಲ್ (29), ಶಂಭು ಮಂಡಲ (28), ದಿಲೀಪ್ (24), ದುರ್ಗೇಶ್. ಗಾಯಗೊಂಡ ಎಲ್ಲರೂ ಕಟ್ಟಡ ಕಾರ್ಮಿಕರಾಗಿದ್ದಾರೆ. ಗಾಯಾಳುಗಳನ್ನು ವೈಟ್ ಪೀಲ್ಡ್ ನ ವೈದೇಹಿ ಅಸ್ವತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ವಿಚಾರ ತಿಳಿಯುತ್ತಿದ್ದಂತೆ.ಸ್ಥಳಕ್ಕೆ ದೌಡಾಯಿಸಿರುವ ಹೊಸಕೋಟೆ ಡಿವೈಎಸ್ಪಿ ಉಮಾಶಂಕರ್ ಹಾಗೂ ತಿರುಮಲಶೆಟ್ಟಿಹಳ್ಳಿ ಪೋಲಿಸರು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ.
ದೇವೇಗೌಡರ ಪುತ್ರಿ ಒಡೆತನದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
.ಬೆಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕಟ್ಟಡ ಮಾಲೀಕರು, ಕಾರ್ಮಿಕರ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ. ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣದಲ್ಲಿರುವ ಬಹುತೇಕ ಕಾರ್ಮಿಕರು ನಿರ್ಮಾಣ ಹಂತದ ಕಟ್ಟಡದಲ್ಲಿ, ಕೆಳಗಡೆ ತಾತ್ಕಾಲಿಕ ಶೆಡ್ ನಲ್ಲಿ ವಾಸಿಸುತ್ತಿರುದು ಈ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಿದೆ..