Asianet Suvarna News Asianet Suvarna News

ಏರ್‌ಗನ್‌ನಿಂದ ಗಾಳಿಯಲ್ಲಿ ಗುಂಡು; ಚಿಕ್ಕಮಗಳೂರಿನ ಇಬ್ಬರು ಯುವಕರ ಬಂಧನ

ನಗರದ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ ಆತಂಕ ಸೃಷ್ಟಿಸಿದ್ದ ಪ್ರಕರಣದಲ್ಲಿ ಶಿವಮೊಗ್ಗ ತುಂಗಾ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆ ಸಿರಗನಹಳ್ಳಿಯ ಹರ್ಷ ಪಟೇಲ್‌ (23) ಮತ್ತು ಅಜ್ಜಂಪುರದ ಅಭಿಷೇಕ್‌ (23) ಬಂಧಿತರು. ಬಂಧಿತರಿಂದ ಏರ್‌ಗನ್ ಮತ್ತು ವಶಕ್ಕೆ ಪಡೆದ ಪೊಲೀಸರು.

shot in the air from an airgun case arrest of two youth from Chikkamagaluru rav
Author
First Published Dec 31, 2023, 12:24 PM IST

ಶಿವಮೊಗ್ಗ (ಡಿ.31): ನಗರದ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ ಆತಂಕ ಸೃಷ್ಟಿಸಿದ್ದ ಪ್ರಕರಣದಲ್ಲಿ ಶಿವಮೊಗ್ಗ ತುಂಗಾ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆ ಸಿರಗನಹಳ್ಳಿಯ ಹರ್ಷ ಪಟೇಲ್‌ (23) ಮತ್ತು ಅಜ್ಜಂಪುರದ ಅಭಿಷೇಕ್‌ (23) ಬಂಧಿತರು. ಬಂಧಿತರಿಂದ ಏರ್‌ಗನ್ ಮತ್ತು ವಶಕ್ಕೆ ಪಡೆದ ಪೊಲೀಸರು.

ಏನಿದು ಘಟನೆ?

ಡಿ.26ರಂದರು ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ನಡೆದಿದ್ದ ಘಟನೆ. ಕಾರಿನಲ್ಲಿ ಬಂದಿದ್ದ ಆರೋಪಿಗಳು ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಕೆಳಗಿಳಿದು ಕುಣಿದು ಕುಪ್ಪಳಿಸಿದ್ದರು. ಈ ವೇಳೆ ಇನ್ನೊಬ್ಬ ಆರೋಪಿ ಏರ್‌ ಗನ್‌ ಹಿಡಿದುಕೊಂಡಿದ್ದು ಅದರಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಏಕಾಏಕಿ ನಡೆದ ಘಟನೆಯಿಂದ ಗುಂಡಿನ ಶಬ್ದ ಕೇಳಿ ರಸ್ತೆಯಲ್ಲಿ ಓಡಾಡುತ್ತಿದ್ದವರು ಕೆಲ ಕಾಲ ಆತಂಕಕ್ಕೀಡಾಗಿದ್ದರು. ಕೆಲವರು ಇದು ಗೂಂಡಿನ ದಾಳಿ ಆತಂಕದಲ್ಲಿ ಓಡಿದ್ದರು.

ತುಂಡುಡುಗೆ ಧರಿಸುತ್ತಾಳೆಂದು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ!

ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಳಿಕ ಪರಿಶೀಲನೆ ನಡೆಸಿದ್ದ ತುಂಗಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಜಾಗರೂಕತೆ ಮತ್ತು ಬೇಜವಾಬ್ದಾರಿ ತೋರಿದ ಹಿನ್ನೆಲೆ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲು ಮಾಡಿಕೊಂಡು ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಇದೀಗ ಚಿಕ್ಕಮಗಳೂರು ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು.

ಮಾನ್ಯ ಸಿದ್ದರಾಮಯ್ಯ ಅವರಿಗೆ ಸಾಷ್ಟಾಂಗ ನಮಸ್ಕಾರಗಳು: ಸಹೋದರನ ಬಂಧಿಸಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಭಾವುಕ ನುಡಿ

Follow Us:
Download App:
  • android
  • ios