ಮುಂಬೈ ( ಜ.  12) ಗಾಯಕಿಯೊಬ್ಬರು  ದೂರು ನೀಡಿದ ಮೇಲೆ ಮಹಾರಾಷ್ಟ್ರದಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಮಹಾರಷ್ಟ್ರ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟಕ್ಕೆ ಕಂಪನವಾಗಿದೆ.

ಸಂಪುಟದಲ್ಲಿ ಸಚಿವರಾಗಿರುವ  ಧನಂಜಯ ಮುಂಡೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಖ್ಯಾತ ಗಾಯಕಿ  ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿಯೂ ಬರೆದುಕೊಂಡಿದ್ದಾರೆ.

ಕ್ಲೀನರ್ ನಿಂದ ಚಲಿಸುವ ಬಸ್ ನಲ್ಲಿ ಮಹಿಳೆ ಮೇಲೆ ಎರಡು ಸಾರಿ ರೇಪ್

ಸಚಿವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಪರಂ ಭೀರ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ. ಸಚಿವ ಧನುಂಜಯ ಮುಂಡೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಪೊಲೀಸರು ಈ ದೂರು ತೆಗೆದುಕೊಳ್ಳಲು ಒಪ್ಪಲಿಲ್ಲ ಎಂದು ಹೇಳಿದ್ದಾರೆ.

ಜನವರಿ 10 ರಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ದೂರನ್ನು ಇನ್ನೂ ತೆಗೆದುಕೊಳ್ಳಲಾಗಿಲ್ಲ ಎಂದು ಗಾಯಕಿ ಹೇಳಿದ್ದಾರೆ. ಆಕೆ ನೀಡಿರುವ ದೂರನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ನನ್ನ ಪ್ರಾಣಕ್ಕೆ ಅಪಾಯ ಇದ್ದು ರಕ್ಷಣೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ತಮ್ಮ ನೆರವಿಗೆ ಬರಲು ವಿಪಕ್ಷಗಳನ್ನು ಕೋರಿರುವ ಗಾಯಕಿ ಶೋಷಣೆ ನೀಡದವರಿಗೆ ಎಲ್ಲರೂ ಸೇರಿ ಶಿಕ್ಷೆ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ ಗಾಯಕಿ ಈ ಸ್ಫೋಟ ಮಾಡಿದ್ದು ಮಹಾರಾಷ್ಟ್ರದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ. 

ಈ ದೂರಿನಲ್ಲಿ  ಯಾವ ಆಧಾರವಿಲ್ಲ. ನನ್ನ ಇಮೇಜ್ ಹಾಳು ಮಾಡಲು ಇಂಥ ಕೆಲಸ ಮಾಡಲಾಗಿದೆ ಎಂದು ಧನಂಜಯ್ ಮುಂಡೆ ಹೇಳಿದ್ದಾರೆ.