ಮಂಡ್ಯ[ನ.22]: ಟಾಟಾ ಸುಮೋ ಮತ್ತು ಕ್ಯಾಂಟರ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟು, ಒಂಬತ್ತು ಮಂದಿ ತೀವ್ರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಚೆಚೆಟ್ಟನಹಳ್ಳಿ ಬಳಿ ಗುರುವಾರ ರಾತ್ರಿ ನಡೆದಿದೆ.

ನಾಗಮಂಗಲ ತಾಲೂಕಿನ ಬಾಕರ್‌ ಶರೀಫ್‌(50), ಮೆಹಬೂಬ್‌ ಖಾನ್‌(47), ನವ್‌ಸಾದ್‌(45), ಮಕ್ಸೂದ್‌(35), ಪಾಯಿರ್‌ ಪಾಷ ಮೃತಪಟ್ಟವರೆಂದು ಗುರುತಿಸಲಾಗಿದೆ. ಮೃತಪಟ್ಟವರಲ್ಲಿ ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ದಿನಪತ್ರಿಕೆಯ ಹಾವೇರಿ ಜಿಲ್ಲಾ ವರದಿಗಾರ ರಸ್ತೆ ಅಪಘಾತಕ್ಕೆ ಬಲಿ

ಒಂಬತ್ತು ಮಂದಿ ಗಂಭೀರ ಗಾಯಗೊಂಡಿದ್ದು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳೂರು ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಚೆಚೆಟ್ಟನಹಳ್ಳಿ ಬಳಿ ಟಾಟಾ ಸುಮೋ ಒಂದು ಒವರ್‌ಟೇಕ್‌ ಮಾಡುವ ಭರದಲ್ಲಿ ಮುಂದಿನಿಂದ ಬರುತ್ತಿದ್ದ ಗೂಡ್ಸ್‌ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.