ರಂಗ ಕಲಾವಿದ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ!
ಸಮಾಜ ಸೇವೆ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಕಾಪು ತಾಲೂಕಿನಾದ್ಯಂತ ಭಾರೀ ಹೆಸರು ಗಳಿಸಿದ್ದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಡುಪಿ (ಡಿ.13): ಸಮಾಜ ಸೇವೆ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಕಾಪು ತಾಲೂಕಿನಾದ್ಯಂತ ಭಾರೀ ಹೆಸರು ಗಳಿಸಿದ್ದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಪುವಿನಲ್ಲಿರುವ ಅವರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದು, ದಂಪತಿ ಸಮಾಜ ಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಬಹಳ ಸಕ್ರೀಯರಾಗಿದ್ದರು. ಲೀಲಾಧರ ಶೆಟ್ಟಿಯವರು ರಂಗಕರ್ಮಿಯಾಗಿದ್ದು, ರಂಗತರಂಗ ನಾಟಕ ತಂಡದವನ್ನು ಬೆಳೆಸಿದ್ದರು.
ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಹ ಸ್ಪರ್ಧಿಸಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಅತ್ಯಂತ ಆಪ್ತರಾಗಿದ್ದ ಲೀಲಾಧರ ಶೆಟ್ಟಿ ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು. ದಂಪತಿ ಕೌಟುಂಬಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡಿತರ ಅಕ್ಕಿ ಅಕ್ರಮ: ಸಿಐಡಿ ತನಿಖೆಗೆ ಸದನದಲ್ಲಿ ಶಾಸಕ ಕಂದಕೂರು ಆಗ್ರಹ
ವಿಷ ಸೇವಿಸಿ ರೈತ ಆತ್ಮಹತ್ಯೆ: ಸಾಲಭಾದೆ ತಾಳಲಾರದೇ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ದೇವಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲೆ.ತಿಮ್ಮಯ್ಯರ ಪುತ್ರ ವೆಂಕಟರಾಮು (55) ಆತ್ಮಹತ್ಯೆಗೆ ಶರಣಾದ ರೈತ. ವೆಂಕಟರಾಮು 4 ಎಕೆರೆ ಜಮೀನು ಹೊಂದಿದ್ದು ಕಬ್ಬು, ತೆಂಗು ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದರು ಎನ್ನಲಾಗಿದೆ. ಬೋರ್‌ವೆಲ್ ಕೊರೆಸಲು ಹಾಗೂ ವ್ಯವಸಾಯಕ್ಕಾಗಿ ಕೆನರಾ ಬ್ಯಾಂಕ್‌ನಲ್ಲಿ 2 ಲಕ್ಷ ರು. ಸಾಲ ಹಾಗೂ 2.96 ಲಕ್ಷ ಚಿನ್ನದ ಮೇಲಿನ ಸಾಲ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1.10 ಲಕ್ಷ ರು. ಸೇರಿದಂತೆ ಸುಮಾರು 4 ಲಕ್ಷದಷ್ಟು ಕೈ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ.
ಚುನಾವಣೆ ಹೊತ್ತಲ್ಲಿ ಮತ್ತೆ ಪಂಚಮಸಾಲಿ ಹೋರಾಟ ಕಿಚ್ಚು
ವೆಂಕಟರಾಮು ಶನಿವಾರ ದೇವಿಪುರ ಹೊರ ವಲಯದ ಜಮೀನಿಲ್ಲಿ ವಿಷಕುಡಿದು ಆಸ್ವಸ್ಥಗೊಂಡಿರುವುದನ್ನು ಕಂಡ ಪಕ್ಕದ ಜಮೀನಿನ ಮಾಲೀಕರು ತಕ್ಷಣವೇ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಪುತ್ರ ಕುಮಾರ್ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.