ಹಾಸನ (ಜೂ. 29) SSLC  ಪರೀಕ್ಷೆ ಸರಿಯಾಗಿ ಬರೆದಿಲ್ಲ ಎಂದು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನದ ಆಡುವಳ್ಳಿ ಬಡಾವಣೆಯಲ್ಲಿ ಘಟನೆ ನಡೆದಿದೆ. ಮೌಲ್ಯ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದೊಂದು ವ್ಯವಸ್ಥಿತ ಕೊಲೆ

ಇಂಗ್ಲೀಷ್, ಗಣಿತ ಪರೀಕ್ಷೆಯನ್ನು ಬಾಲಕಿ ಬರೆದಿದ್ದರು.  ಹಾಸನದ ಸಿಕೆಎಸ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮೌಲ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೊಟ್ಟೆನೋವಿನಿಂದ ಎಕ್ಸಾಂ ಸರಿಯಾಗಿ ಬರೆದಿಲ್ಲ, ಫೇಲಾದರೆ ಮರ್ಯಾದೆಯಿರಲ್ಲ ಎಂದು ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾಳೆ.  ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು  ಹಾಸನ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೊರೋನಾ ಅಬ್ಬರದ ನಡುವೆಯೂ ಶಿಕ್ಷಣ ಇಲಾಖೆ ಸವಾಲಿನ ರೀತಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ನಡೆಸುತ್ತಿದೆ. ಹಾಸನದಲ್ಲಿಯೇ ಪರೀಕ್ಷೆ ಬರೆದ ವಿದ್ಯಾರ್ಥಿಯೊಬ್ಬನಿಗೆ ಸೋಂಕು ದೃಢಪಟ್ಟಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು.