ಪ್ರಾಂಶುಪಾಲರ ಎದುರಲ್ಲೇ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಸಿಬ್ಬಂದಿ!
ಶಾಲೆ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಅಮಾನವೀಯ ಕೃತ್ಯ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಕೋಲಾರ (ಡಿ.17) : ಶಾಲೆ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಅಮಾನವೀಯ ಕೃತ್ಯ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ವಸತಿ ಶಾಲೆಯಲ್ಲಿ ಸುಮಾರು 250 ಜನ ಮಕ್ಕಳು ಇದ್ದಾರೆ. ಪ್ರತಿನಿತ್ಯ ಮಕ್ಕಳೊಂದಿಗೆ ಅಮಾನವೀಯ ವರ್ತನೆ. ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್.
ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿದ ರೀತಿಯಲ್ಲಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ನೀಡುವುದು ಮಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳಿಗೆ ಕಿರುಕುಳ ನೀಡುವ ಫೋಟೊ ವಿಡಿಯೋಗಳು ಲಭ್ಯವಾಗಿವೆ. ಮಕ್ಕಳಿಗೆ ಕಿರುಕುಳ ನೀಡಿರುವ ಶಿಕ್ಷಕರ ವಿರುದ್ದ ಕ್ರಮಕ್ಕೆ ಪೊಷಕರ ಆಗ್ರಹಿಸಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ವಿದ್ಯಾರ್ಥಿಯೇ ವಿಷ ಬೆರೆಸಿರುವ ಕೃತ್ಯ ಬಯಲಿಗೆಳೆದ ಪೊಲೀಸ್!