Bengaluru: ಸಿಲಿಕಾನ್ ಸಿಟಿಯಲ್ಲಿ ನೇಣು ಬಿಗಿದುಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ
ಸಿಲಿಕಾನ್ ಸಿಟಿಯಲ್ಲಿ ನೇಣು ಬಿಗಿದುಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಮಿತ್ರಾ (32) ಮೃತ ನರ್ಸ್ ಎಂದು ತಿಳಿದು ಬಂದಿದ್ದು, ಇವರು ಪ್ರಶಾಂತ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.
ಬೆಂಗಳೂರು (ಜು.22): ಸಿಲಿಕಾನ್ ಸಿಟಿಯಲ್ಲಿ ನೇಣು ಬಿಗಿದುಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಮಿತ್ರಾ (32) ಮೃತ ನರ್ಸ್ ಎಂದು ತಿಳಿದು ಬಂದಿದ್ದು, ಇವರು ಪ್ರಶಾಂತ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಸದ್ಯ 32 ವರ್ಷವಾದ್ರೂ ಸುಮಿತ್ರಾಗೆ ಮದುವೆಯಾಗಿರಲಿಲ್ಲ. ಹೀಗಾಗಿ ಖಿನ್ನತೆಯಿಂದ ಮಹಿಳೆ ಬಳಲುತ್ತಿದ್ದು, ಕುಟುಂಬಸ್ಥರೊಂದಿಗೆ ವಾಸವಿದ್ದರು. ನಿನ್ನೆ (ಗುರುವಾರ) ರಾತ್ರಿ ರೂಮ್‌ನಲ್ಲಿ ಮಹಿಳೆ ನೇಣಿಗೆ ಕೊರೊಳೊಡ್ಡಿದ್ದಾರೆ.
ಮುಂಜಾನೆ ಬಾಗಿಲು ತಟ್ಟಿದರು ಬಾಗಿಲು ಓಪನ್ ಮಾಡಿರಲಿಲ್ಲ. ಅನುಮಾನ ಬಂದು ಬಾಗಿಲು ಮುರಿದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೃತಳ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಸುಮಿತ್ರಾ ಬರೆದಿದ್ದಾರೆ. ಅಲ್ಲದೇ ಡೆತ್ ನೋಟ್‌ನಲ್ಲಿ ನನ್ನನ್ನು ಖುಷಿಯಾಗಿ ಕಳುಹಿಸಿಕೊಡಿ ಎಂದು ಬರೆದಿದ್ದಾರೆ. ಇನ್ನು ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿ, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಯೂಟ್ಯೂಬ್ ಚಾನೆಲ್‌ಗೆ ಜಾಸ್ತಿ ಸಬ್‌ಸ್ಕ್ರೈಬರ್ ಇಲ್ಲ ಅಂತ ಐಐಟಿ ಸ್ಟೂಡೆಂಟ್ ಸುಸೈಡ್
ಡಿಗ್ಗಿ ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆ: ಬೆಂಗಳೂರಿನ ಕೆಂಗೇರಿ ಉಪನಗರದ ಜೆಎಸ್‌ಎಸ್ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ಶಿವಾನಿ ಕಾಶಿನಾಥ ಹಡಪದ(21) ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬುಧವಾರ ಮೂರನೇ ಸೆಮಿಸ್ಟರ್ ಪರೀಕ್ಷೆ ಇತ್ತು. ಪರೀಕ್ಷೆಗೆ ಹಾಜರಾಗದ ಕಾರಣ ಸ್ನೇಹಿತೆ, ಹಾಸ್ಟೆಲ್ ವಾರ್ಡ್‌ನ ಮೊಬೈಲ್‌ಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾಳೆ. ವಾರ್ಡ್‌ನ ಮಧ್ಯಾಹ್ನ ಶಿವಾನಿ ರೂಂ ಬಳಿಗೆ ಬಂದು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ವಿಷಯ ತಿಳಿದ ಪ್ರಾಂಶುಪಾಲರು ಹಾಸ್ಟೆಲ್‌ಗೆ ಬಂದು ಸಹಾಯಕರ ಮೂಲಕ ಕಿಟಕಿಯಲ್ಲಿ ಪರಿಶೀಲನೆ ನಡೆಸಿದ್ದಾಗ ಶಿವಾನಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ವಿದ್ಯಾರ್ಥಿನಿ ತಂದೆ ಕಾಶಿನಾಥ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಶಿವಾನಿ ಅಂತ್ಯಕ್ರಿಯೆ ಸ್ವಗ್ರಾಮ ಡಿಗ್ಗಿಯಲ್ಲಿರುವ ಹೊಲದಲ್ಲಿ ಜು.22 ರಂದು ಬೆಳಿಗ್ಗೆ 8 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸೇತುವೆ ಮೇಲೆ ಡಿಯೋ ನಿಲ್ಲಿಸಿ, ನದಿಗೆ ಹಾರಿದ ತಾಲೂಕು ಪಂಚಾಯಿತಿ ಸದಸ್ಯನ ಪುತ್ರಿ
ಜೀವನದಲ್ಲಿ ಜಿಗುಪ್ಸೆಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆ: ಜೀವನದಲ್ಲಿ ಜಿಗುಪ್ಸೆಗೊಂಡು ಎಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೀದರ್ ಮೂಲದ ಶಿವಾನಿ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕೆಂಗೇರಿಯ ಜೆಎಸ್‌ಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದಳು. ಬುಧವಾರ ಜೆಎಸ್‌ಎಸ್ ವಿದ್ಯಾರ್ಥಿ ನಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ ಪರೀಕ್ಷೆಗೆ ಶಿವಾನಿ ಗೈರು ಹಾಜರಾಗಿದ್ದಳು. ಹೀಗಾಗಿ ವಾರ್ಡನ್ ಕಾವ್ಯ ಅವರು ಮಧ್ಯಾಹ್ನ 1.20ರ ಸುಮಾರಿಗೆ ಶಿವಾನಿ ಉಳಿದುಕೊಂಡಿದ್ದ ವಿದ್ಯಾರ್ಥಿನಿ ನಿಲಯದ ಕೊಠಡಿ ಬಳಿ ತೆರಳಿದ್ದಾರೆ. ಸೀಲಿಂಗ್ ಫ್ಯಾನ್‌ಗೆ ಶಿವಾನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.