Asianet Suvarna News Asianet Suvarna News

ಮೈಸೂರು: ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ

ಮೃತ ರೇಣುಕಾ ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ರೇಣುಕಾಗೆ ಆಗಾಗ್ಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ರೇಣುಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

Student Committed Suicide For Stomach Pain at Nanjangud in Mysuru grg
Author
First Published Sep 30, 2023, 12:59 PM IST

ಮೈಸೂರು(ಸೆ.30):  ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. ಮಹದೇವು ಎಂಬುವವರ ಪುತ್ರಿ ರೇಣುಕಾ(17) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. 

ಮೃತ ರೇಣುಕಾ ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ರೇಣುಕಾಗೆ ಆಗಾಗ್ಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ರೇಣುಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಗಂಡನ ಮುಂದೆಯೇ ಪತ್ನಿ ಮೇಲೆ ಅತ್ಯಾಚಾರ: ವಿಷ ಸೇವಿಸಿ ಸಾವಿಗೆ ಶರಣಾದ ದಂಪತಿ

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ, ಪಿಎಸ್ಐ ರಾಮಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow Us:
Download App:
  • android
  • ios