ವಿಜಯಪುರ(ಸೆ.21): ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಮೂಲತಃ ಕಲಬುರಗಿ ನಗರದ ಐಶ್ವರ್ಯ ಶಂಕರ ನಾಟಿಕಾರ (24) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. 

ತಂಗಿ ಆತ್ಮಹತ್ಯೆಗೆ ಕಾರಣವೆಂದು ಭಾವನನ್ನೇ ಹತ್ಯೆಗೈದ ಯೋಧ

ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಸಾವಿನ ನಿಖರ ಕಾರಣ ತಿಳಿದು ಬರಲಿದೆ. ಈಚೆಗಷ್ಟೇ ಈ ವಿದ್ಯಾರ್ಥಿನಿಗೆ ಮದುವೆಯ ನಿಶ್ಚಿತಾರ್ಥವಾಗಿತ್ತು. ಅಲ್ಲದೆ ಸೋಮವಾರ ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಲಿದ್ದಳು. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.