Asianet Suvarna News Asianet Suvarna News

Bengaluru: ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು: ತಿಂಗಳಲ್ಲಿ 3ನೇ ಘಟನೆ

ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಾಗುತ್ತಿದೆ ಮಹಡಿಯಿಂದ ಬಿದ್ದು ಸಾವನ್ನಪ್ಪುವ ಪ್ರಕರಣ
ಒಂದೇ ತಿಂಗಳಲ್ಲಿ ಮೂರು ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣ ದಾಖಲಾಗಿವೆ
ಕಾಲೇಜು ಓದುತ್ತಿದ್ದ ವಿದ್ಯಾರ್ಥಿ ಸಾವಿನ ಸುತ್ತ ಅನುಮಾನದ ಹುತ್ತ

Student dies after falling from third floor 3rd death in a month sat
Author
First Published Dec 29, 2022, 11:34 AM IST

ಬೆಂಗಳೂರು (ಡಿ.29):  ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 15 ದಿನಗಳಲ್ಲಿ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪುವ ಪ್ರಕರಣ ಇಂದು ವರದಿಯಾಗಿದೆ. ಸುವ್ರಹ್ಮಣ್ಯ ನಗರದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಮನೆಯ ಮೂರನೇ ಮಹಡಿ ಮೇಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಇನ್ನು ಮಹಡಿಯಿಂದ ಬಿದ್ದು ಮೃತಪಟ್ಟ ವಿದ್ಯಾರ್ಥಿಯನ್ನು ಪವನ್ (19)  ಎಂದು ಗುರುತಿಸಲಾಗಿದೆ. ಈ ಘಟನೆ ಸುಬ್ರಹ್ಮಣ್ಯಪುರದಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ನಡೆದಿದೆ. ಸ್ಥಳಕ್ಕೆ ಸುಬ್ರಮಣ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ವಿದ್ಯಾರ್ಥಿ ಸಾವಿನ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ಮತ್ತು ಇತರೆ ಮೂಲಗಳಿಂದ ಸಾವಿನ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ. 

ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ: ಮೃತ ವಿದ್ಯಾರ್ಥಿ ಪವನ್‌ ಎಎಸ್ ಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದನು. ಫೈನಲ್ ಇಯರ್ ಬಿಬಿಎ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಸಂಜೆ ಕಾಲೇಜಿನಿಂದ ಹೆಗ್ಗನಹಳ್ಳಿ ಮನೆಗೆ ಬಂದಿದ್ದಾನೆ. ಬಳಿಕ ಮನೆಯಲ್ಲಿ ಬ್ಯಾಗ್ ಇಟ್ಟು ಸುಬ್ರಮಣ್ಯನಗರ ಮಿಲ್ಕ್ ಕಾಲೋನಿ ಬಳಿ ಬಂದಿದ್ದಾನೆ. ಮಿಲ್ಕ್ ಕಾಲೋನಿ ಮೈದಾನ ಸಮೀಪದ ಕಟ್ಟಡವೊಂದರಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಯ ಜೇಬಿನಲ್ಲಿ ಯಾವುದೇ ಡೆತ್‌ ನೋಟ್‌ ಅಥವಾ ಇನ್ಯಾವುದೇ ಸಾಕ್ಷಿಗಳು ಲಭ್ಯವಾಗಿಲ್ಲ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. 

7ನೇ ಮಹಡಿಯಿಂದ ಜಿಗಿದು ಎಲ್‌ಎಲ್‌ಬಿ ವಿದ್ಯಾರ್ಥಿನಿ ಆತ್ಮಹತ್ಯೆ!

ಸಾವಿನ ಸುತ್ತ ಅನುಮಾನದ ಹುತ್ತ: ವಿದ್ಯಾರ್ಥಿಯ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ತಮ್ಮ ಹೆಗ್ಗನಹಳ್ಳಿ ಮನೆಯಿಂದ ಸುಬ್ರಹ್ಮಣ್ಯ ಪುರಕ್ಕೆ ಯಾವ ಕಾರಣಕ್ಕಾಗಿ ಬಂದಿದ್ದನೋ ನಮಗೂ ಗೊತ್ತಿಲ್ಲ. ಯಾರೊಂದಿಗೆ ಬಂದಿದ್ದ, ಕಟ್ಟಡದ ಮೇಲೆ ಏನಕ್ಕೆ ಹೋಗಿದ್ದ ಅನ್ನೋದು ಇನ್ನು ನಿಗೂಢವಾಗಿದೆ. ಅವನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಯಾವುದೇ ಪರಿಸ್ಥಿತಿಯೂ ಇರಲಿಲ್ಲ ಎಂದು ಮನೆಯವರು ಕೂಡ ಅನುಮಾನ ವ್ಯಕ್ತಪಡಿಸಿದ್ದಾರೆ. ಎದೆಯುದ್ದ ಬೆಳದ ಮಗ ತಮ್ಮ ವೃದ್ಯಾಪ್ಯ ಕಾಲದಲ್ಲಿ ಆಸರೆಯಾಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ ಮೃತ ಯುವಕನ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಸುಬ್ರಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಅನುಮಾನಸ್ಪದ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Bengaluru Crime: ಅನಾರೋಗ್ಯ ತಾಳಲಾರದೇ 19ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಮಹಿಳೆ

ಮಹಡಿಯಿಂದ ಬಿದ್ದು ಮೂರನೇ ಸಾವು: ಕಳೆದ 15 ದಿನಗಳ ಹಿಂದೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಳು. ಇದಕ್ಕೆ ಕಾರಣ ತನ್ನನ್ನು ಬಲವಂತವಾಗಿ ಮದುವೆ ಮಾಡಲಾಗುತ್ತಿದ್ದು, ಭಾವಿ ಪತಿ ಕಾಲೇಜು ಬಿಟ್ಟು ಸುತ್ತಾಡಲು ಕರೆಯುತ್ತಿದ್ದಾನೆ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಳು. ಕಳೆದೊಂದು ವಾರದ ಹಿಂದೆ ಎನ್‌ಆರ್‌ಐ ಮಹಿಳೆಯೊಬ್ಬರು ತನಗೆ ಆರೋಗ್ಯ ಸಮಸ್ಯೆಯಿದೆ ಎಂದು ತಲಘಟ್ಟಪುರದ ಅಪಾರ್ಟ್‌ಮೆಂಟ್‌ನಿಂದ ಹಾರಿ ಸಾವನ್ನಪ್ಪಿದ್ದ ಘಟನೆ ವರದಿಯಾಗಿತ್ತು.  ಇನ್ನು ಮಹಡಿಯಿಂದ ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ನಿಗಾವಹಿಸಬೇಕು. ಜೊತೆಗೆ ಇಂತಹ ಸಾವುಗಳನ್ನು ತಡೆಗಟ್ಟಲು ಕ್ರಮವಹಿಸಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Follow Us:
Download App:
  • android
  • ios