11 ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್, ಗುಜರಾತ್‌ನಲ್ಲಿ ಬಂಧಿಸಿದ ಮೈಸೂರು ಪೊಲೀಸ್!

ಕಳೆದ ಕೆಲ ದಿನಗಳಿಂದ ಪೊಲೀಸರಿಗೆ ತೀವ್ರ ತಲೆನೋವಾಗಿದ್ದ ಅನೈತಿಕ ದಂಧೆಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 11 ದಿನಗಳ ಬಳಿಕ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ.

Supply of girls to high profile and accused of rape santro ravi arrest by Mysuru police in Gujarat ckm

ಅಹಮ್ಮದಾಬಾದ್(ಜ.13): ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 11 ದಿನಗಳಿಂದ ಮೈಸೂರು ಪೊಲೀಸರು ಸ್ಯಾಂಟ್ರೋ ರವಿಗಾಗಿ ಬಲೆ ಬೀಸಿದ್ದರು. ರಾಜ್ಯದ ಮೂಲೆ ಮೂಲೆಗೆ ತೆರಳಿ ವಿಚಾರಣೆ ನಡೆಸಿದ್ದರು. ರಾಜ್ಯದಿಂದ ಪರಾರಿಯಾಗಿ ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. 

ಸ್ವಂತ ಫೋನನ್ನು ಬಳಸದೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಸ್ಯಾಂಟ್ರೋ ರವಿಯ ಚಲನವಲನಗಳನ್ನು ಪತ್ತೆ ಮಾಡಲು ಪೊಲೀಸರು ಸೈಬರ್‌ ತಾಂತ್ರಿಕ ನೆರವನ್ನು ಬಳಸಿಕೊಂಡಿದ್ದರು. ರವಿ ಫೋನ್ ಹಾಗೂ ಸ್ಯಾಟಲೈಟ್ ಮಾಹಿತಿ ಆಧಾರದ ಮೇಲೆ ಮೈಸೂರು ಪೊಲೀಸರು ಉಡುಪಿ ಸೇರಿದಂತೆ ರಾಜ್ಯದ ಹಲವು ಭಾಗಗಳಿಗೆ ತೆರಳಿ ವಿಚಾರಣೆ ನಡೆಸಿದ್ದರು. ಆದರೆ ಸ್ಯಾಂಟ್ರೋ ರವಿ ಪತ್ತೆಯಾಗಿರಲಿಲ್ಲ. ತನ್ನ ಸ್ವಂತ ಫೋನ್‌ನ್ನು ಮೈಸೂರಲ್ಲೇ ಸ್ವಿಚ್ ಮಾಡಿದ್ದ ಸ್ಯಾಂಟ್ರೋ ರವಿ ಇತರ ಫೋನ್‌ಗಳನ್ನು ಬಳಸುತ್ತಿದ್ದ.

 

 

Santro ravi Case: ಸ್ಯಾಂಟ್ರೋ ರವಿಗೆ ಯಾವುದೇ ಜವಾಬ್ದಾರಿ ಕೊಟ್ಟಿರಲಿಲ್ಲ: ಸಿ.ಟಿ.ರವಿ

2ನೇ ಪತ್ನಿ ನೀಡಿದ ದೂರಿನ ಆಧಾರದಲ್ಲಿ ಮೈಸೂರು ಪೊಲೀಸರು ತನಿಖೆ ಆರಂಭಿಸಿದ್ದರು. ಯಾವಾಗ ಸ್ಯಾಂಟ್ರೋ ರವಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಆರಂಭಿಸಿದ್ದ, ಮೈಸೂರು ಪೊಲೀಸರು 6 ತಂಡಗಳನ್ನು ರಚಿಸಿ ವಿಚಾರಣೆ ನಡೆಸಲಾಗಿತ್ತು. ಸ್ಯಾಂಟ್ರೋ ರವಿ ಸಂಪರ್ಕದಲ್ಲಿದ್ದವರ ವಿಚಾರಣೆ ನಡೆಸಲಾಗಿತ್ತು. ಇಷ್ಟೇ ಅಲ್ಲ ಇವರ ಮೇಲೆ ನಿಗಾವಹಿಸಲಾಗಿತ್ತು. 

ಮೈಸೂರಿನಲ್ಲಿ ಫೋನ್ ಸ್ವಿಚ್ ಆಫ್ ಮಾಡಿ ಕಾರಿನಲ್ಲೇ ರಾಜ್ಯದಿಂದ ರಾಜ್ಯಕ್ಕೆ ಸುತ್ತಾಟ ನಡೆಸಿದ್ದ ಸ್ಯಾಂಟ್ರೋ ರವಿ ಜಾಡು ಹಿಡಿದ ಮೈಸೂರು ಪೊಲೀಸರು ಗುಜರಾತ್‌ಗೆ ತೆರಳಿದ್ದರು. ಸಣ್ಣ ಸುಳಿವಿನ ಆಧಾರದ ಮೇಲೆ ತೆರಳಿದ ಪೊಲೀಸರು ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಿಂದ ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಎಸಿಪಿ ಬೇಡವೆಂದರೂ ಸ್ಯಾಂಟ್ರೋ ರವಿ ಪತ್ನಿ ಬಂಧಿಸಿ ಜೈಲಿಗಟ್ಟಿದ ಇನ್‌ಸ್ಪೆಕ್ಟರ್‌!

ಎಡಿಜಿಪಿ ಆಲೋಕ್ ಕುಮಾರ್ ಸುದ್ದಿಗೋಷ್ಠಿ
ಪೊಲೀಸರಿಗೆ ಸವಾಲಾಗಿದ್ದ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಮೈಸೂರು ಪೊಲೀಸರು ಭಾರಿ ಯಶಸ್ಸು ಸಾಧಿಸಿದ್ದಾರೆ. ಗುಜರಾತ್‌ನಲ್ಲಿ ಸ್ಯಾಂಟ್ರೋ ರವಿಯನ್ನು ಬಂಧನದ ಬೆನ್ನಲ್ಲೇ ಇದೀಗ ಎಡಿಜಿಪಿ ಆಲೋಕ್ ಕುಮಾರ್ ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.

ಮಂಡ್ಯ, ರಾಮನಗರ, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಆತನ ಮನೆಯಲ್ಲಿ ಶೋಧ ನಡೆಸಲಾಗಿತ್ತು. ಬ್ಯಾಂಕ್‌ ಖಾತೆ, ಲಾಕರ್‌ ಮಾಹಿತಿ ಸಂಗ್ರಹಿಸಿ ಪತ್ತೆಗೆ ತಂಡ ರಚಿಸಲಾಗಿತ್ತು.
ಸ್ಯಾಂಟ್ರೊ ರವಿ ವಿರುದ್ಧ ಮೈಸೂರಿನ ವಿಜಯನಗರ ಠಾಣೆಯಲ್ಲಿ ಅತ್ಯಾಚಾರ ಮತ್ತು ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ, ಆಕೆಯ ತಂಗಿಯ ಐಪಿಸಿ 164 (ಹೇಳಿಕೆ ದಾಖಲು) ಅಡಿಯಲ್ಲಿ ಹೇಳಿಕೆ ದಾಖಲಾಗಿದೆ. ಇದರ ಜೊತೆಗೆ ಅಕ್ರಮವಾಗಿ ಹಣ ಸಂಪಾದನೆ ಮಾಡಿರುವ ಕುರಿತಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಲ್ಲಿ ವಿಚಾರಣೆ ನಡೆಸಲು ಮೈಸೂರು ಪೊಲೀಸರು ಸಜ್ಜಾಗಿದ್ದಾರೆ. 

Latest Videos
Follow Us:
Download App:
  • android
  • ios