ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಬೋರಾಳ ಗ್ರಾಮದ ಬಾಬುರಾವ ಪಾಂಡ್ರೆ (54) ಮೃತ ವ್ಯಕ್ತಿ. ತನ್ನ ಬಟ್ಟೆ ಅಂಗಡಿಯಲ್ಲಿ ತಂಗುತಿದ್ದ ಬೆಳಿಗ್ಗೆ ಅಂಗಡಿಯ ಸ್ವಲ್ಪ ದೂರದಲ್ಲಿ ಮೃತ ವ್ಯಕ್ತಿಯ ಗುಪ್ತಾಂಗ, ಕೈ ಬೆರಳು, ಮೂಗು ಕತ್ತರಿಸಿರುವ ರೀತಿಯಲ್ಲಿ ಕಂಡು ಬಂದಿದೆ.

ಔರಾದ್(ಸೆ.21):  ಪಟ್ಟಣದ ಹೃದಯ ಭಾಗದಲ್ಲಿರುವ ಅಮರೇಶ್ವರ ಮಂದಿರದ ಹಿಂಭಾಗದ ರುದ್ರಭೂಮಿಯಲ್ಲಿ ಬಟ್ಟೆ ವ್ಯಾಪಾರಿಯ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಜರುಗಿದೆ.

ತಾಲೂಕಿನ ಬೋರಾಳ ಗ್ರಾಮದ ಬಾಬುರಾವ ಪಾಂಡ್ರೆ (54) ಮೃತ ವ್ಯಕ್ತಿ. ತನ್ನ ಬಟ್ಟೆ ಅಂಗಡಿಯಲ್ಲಿ ತಂಗುತಿದ್ದ ಬೆಳಿಗ್ಗೆ ಅಂಗಡಿಯ ಸ್ವಲ್ಪ ದೂರದಲ್ಲಿ ಮೃತ ವ್ಯಕ್ತಿಯ ಗುಪ್ತಾಂಗ, ಕೈ ಬೆರಳು, ಮೂಗು ಕತ್ತರಿಸಿರುವ ರೀತಿಯಲ್ಲಿ ಕಂಡು ಬಂದಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ರಘುವೀರಸಿಂಗ್ ಠಾಕೂರ್ ಭೇಟಿ ನೀಡಿ ಪರಿಶೀಲಿಸಿದರು. ಮೃತ ದೇಹನ್ನು ಬೀದರ್‌ನ ಬ್ರೀಮ್ಸ್ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ವರದಕ್ಷಿಣೆ ಕಿರುಕುಳ: ಮದುವೆಯಾಗಿ ನಾಲ್ಕೇ ತಿಂಗಳಿಗೆ ಮಸಣ ಸೇರಿದ ಯುವತಿ!

ಈ ವೇಳೆ ಎಎಸ್ಪಿ ಮಹೇಶ ಮೇಘಣ್ಣನವರ್ ಮೃತದೇಹವನ್ನು ಪರಿಶೀಲಿಸಿದರು. ಸಾವಿನ ಬಗ್ಗೆ ಎಲ್ಲ ರೀತಿಯಿಂದ ತನಿಖೆ‌ ನಡೆಸಲಾಗುತ್ತದೆ ಎಂದು ಪೊಲೀಸರು ಕುಟುಂಬದ ಸದಸ್ಯರಿಗೆ ಭರವಸೆ ನೀಡಿದ್ದಾರೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.