ನಡುರಾತ್ರಿ ವಿದ್ಯಾರ್ಥಿಗೆ ಶಿಕ್ಷಕಿಯ ಸೆಕ್ಸ್ ಮೆಸೇಜ್, ಪೋಷಕರಿಂದ ದೂರು!
10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯ ಶಿಕ್ಷಕಿ ನಡುರಾತ್ರಿಯಲ್ಲಿ ಅಶ್ಲೀಲ ಮೆಸೇಜ್ ಕಳಿಸಿದ್ದು, ಮಾತ್ರವಲ್ಲದೆ ತನ್ನೊಂದಿಗೆ ಸೆಕ್ಸ್‌ನಲ್ಲಿ ಭಾಗಿಯಾಗುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ನವದೆಹಲಿ (ಅ.13): ಉತ್ತರ ಪ್ರದೇಶದ ಕಾನ್ಪುರದಲ್ಲಿ ಅಚ್ಚರಿಯ ಘಟನೆ ನಡೆದಿದ್ದು, ಶಿಕ್ಷಿಕಿಯೊಬ್ಬರು ತನ್ನ ವಿದ್ಯಾರ್ಥಿಗೆ ನಡುರಾತ್ರಿಯಲ್ಲಿ ಅಶ್ಲೀಲ ಮೆಸೇಜ್ ಕಳಿಸಿದ್ದು ಮಾತ್ರವಲ್ಲದೆ, ತನ್ನೊಂದಿಗೆ ಸೆಕ್ಸ್‌ನಲ್ಲಿ ಭಾಗಿಯಾಗುವಂತೆ ಒತ್ತಾಯಿಸಿದ್ದಾರೆ. ಉನ್ನಾವೋ ಮೂಲದ ವಿದ್ಯಾರ್ಥಿ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಾರೆ. ಅದರ ಬೆನ್ನಲ್ಲಿಯೇ ವಿದ್ಯಾರ್ಥಿಯ ಪೋಷಕರು ಪೊಲೀಸ್ ಠಾಣೆಗೆ ತೆರಳು ದೂರು ದಾಲಿಸಿದ್ದಾರೆ. ತನ್ನ ಮಗನಿಗೆ ಶಿಕ್ಷಕಿ ನಡು ರಾತ್ರಿಯ ಸಮಯದಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸುತ್ತಾರೆ. ಅಷ್ಟೇ ಅಲ್ಲದೆ, ಶಿಕ್ಷಕಿಯ ಪತಿ ಮತ್ತು ಸಹೋದರ ಕೂಡ ಇದೇ ಶಾಲೆಯಲ್ಲಿ ನಿಯೋಜನೆಗೊಂಡಿದ್ದು, ಮೂವರೂ ಸೇರಿ ವಿದ್ಯಾರ್ಥಿಯನ್ನು ಬೇರೆ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಹೇಳಿದ್ದಾರೆ. ಕಾನ್ಪುರದ ಕಂಟೋನ್ಮೆಂಟ್ ಪ್ರದೇಶದ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ತಂದೆ ಶಾಲೆಯ ಶಿಕ್ಷೆಯ ವಿರುದ್ಧವೇ ಇಂಥದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ವಿದ್ಯಾರ್ಥಿಯ ತಂದೆ ಕಂಟೋನ್ಮೆಂಟ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಅನ್ವಯ, ಆರೋಪಿಯಾಗಿರುವ ಶಿಕ್ಷಕಿ, ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ನನ್ನ ಮಗನ ಮೇಲೆ ಒತ್ತಡ ಹೇರುತ್ತಿದ್ದಳು. ಅಲ್ಲದೆ, ತನ್ನ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇರುತ್ತಿದ್ದರು ಎಂದು ದೂರು ನೀಡಿದ್ದಾರೆ.
ಇನ್ನು ವಿದ್ಯಾರ್ಥಿಯ ತಂದೆ ಶಿಕ್ಷಕಿಗೆ ಈ ಕುರಿತಾಗಿ ಫೋನ್ ಮಾಡಿ ಕೂಡ ವಿಚಾರಿಸಿದ್ದು, ಈ ವೇಳೆ ಶಿಕ್ಷಕಿ ಆಗಿದ್ದೆಲ್ಲವನ್ನೂ ಒಪ್ಪಿಕೊಂಡಿದ್ದಾರೆ. ನಂತರ ಈ ವಿಷಯವನ್ನು ಆಕೆಯ ಕುಟುಂಬದ ಗಮನಕ್ಕೆ ತರುವ ಪ್ರಯತ್ನವನ್ನೂ ಮಾಡಲಾಗಿದೆ. ಶಿಕ್ಷಕಿಯ ಪತಿ ಮತ್ತು ಆಕೆಯ ಸಹೋದರ ಕೂಡ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಾರೆ. ಹೀಗಾಗಿ ನಮ್ಮ ಕುಟುಂಬಕ್ಕೆ ಹಾನಿ ಮಾಡುವ ಆತಂಕ ಎದುರಾಗಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು" ಎಂದು ವಿದ್ಯಾರ್ಥಿಯ ತಂದೆ ತಮ್ಮ ದೂರಿನಲ್ಲಿ ಕೋರಿದ್ದಾರೆ.
ಮಂಗಳೂರು: ಕಡಿಮೆ ಅಂಕ ಕೊಟ್ಟಿದ್ದಕ್ಕೆ ಶಿಕ್ಷಕಿಯ ನೀರಿನ ಬಾಟಲ್‌ಗೆ ಅವಧಿ ಮೀರಿದ ಮಾತ್ರೆ ಹಾಕಿದ ಮಕ್ಕಳು..!
ತನಿಖೆ ಆರಂಭಿಸಿದ ಪೊಲೀಸ್:ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ. ಈ ಕುರಿತು ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಎಸಿಪಿ ಬ್ರಜನಾರಾಯಣ ಸಿಂಗ್ ಮಾತನಾಡಿದ್ದು, ಶಾಲಾ ಶಿಕ್ಷಕಿಯ ವಿರುದ್ಧ ದೂರು ಅರ್ಜಿ ಸ್ವೀಕರಿಸಲಾಗಿದೆ. ಇದರ ತನಿಖೆಯನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಮಾಡಿರುವ ಆರೋಪಗಳು ವಿಷಯ ಗಂಭೀರವಾಗಿದೆ ಎಂಬುದನ್ನು ತೋರಿಸುತ್ತದೆ. ತನಿಖೆಯಲ್ಲಿ ಏನೆಲ್ಲ ಸತ್ಯಗಳು ಹೊರಬಿದ್ದವೋ ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.