ಹೋಮ್‌ವರ್ಕ್ ಮಾಡಿಲ್ಲ: ಶಿಕ್ಷೆಗೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Crime News: 8ನೇ ತರಗತಿ ವಿದ್ಯಾರ್ಥಿನಿ ಶಾಲೆಯಿಂದ ವಾಪಸಾದ ಬಳಿಕ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
ಹೈದರಾಬಾದ್ (ಆ. 27): 8ನೇ ತರಗತಿ ವಿದ್ಯಾರ್ಥಿನಿ ಶಾಲೆಯಿಂದ ವಾಪಸಾದ ಬಳಿಕ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಗಸ್ಟ್ 25 ರಂದು ಹೈದರಾಬಾದಿನ ಹಯತ್‌ನಗರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ. ಅಪ್ರಾಪ್ತ ಬಾಲಕಿ ಹೋಮ್ ವರ್ಕ್ ಕಂಪ್ಲೀಟ್ ಮಾಡದ ಕಾರಣಕ್ಕೆ ಶಿಕ್ಷಕಿ ತರಗತಿಯ ಹೊರಗೆ ನಿಲ್ಲಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದು ಬಾಲಕಿ ನೇಣಿಗೆ ಶರಣಾಗಿದ್ದಾಳೆ ಎಂದು ಆಕೆಯ ಪೋಷಕರು ಶಂಕಿಸಿದ್ದಾರೆ.
ಆರ್‌ಟಿಸಿ ಕಾಲೋನಿಯ ಶಾಂತಿನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಷುಲ್ಲಕ ವಿಷಯಕ್ಕೆ ಶಿಕ್ಷಕಿ ತರಗತಿಯಿಂದ ಹೊರಗೆ ನಿಲ್ಲುವಂತೆ ಮಾಡಿದ್ದು ಮಗಳು ಅವಮಾನಕ್ಕೊಳಗಾಗಿ ಈ ರೀತಿ ಮಾಡಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಅದರ ವರದಿಗಾಗಿ ಕಾಯುತ್ತಿದ್ದಾರೆ. ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪತ್ನಿ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ!
ಇತ್ತೀಚೆಗೆ, ಜುಲೈ 2022 ರಲ್ಲಿ, ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕ (15) ತನ್ನ ಮನೆಯ ಸೀಲಿಂಗ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಬಾಲಕ ತನ್ನ ತಾಯಿ ಜನ್ಮದಿನದಂದೇ "ಅತ್ಯುತ್ತಮ ಉಡುಗೊರೆ" ನೀಡುತ್ತಿದ್ದೇನೆ ಎಂದು ಸೂಸೈಡ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ.
ಸರ್ಕಾರಿ ಶಿಕ್ಷಕಿಯಾಗಿದ್ದ ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಹದಿಹರೆಯದ ಯುವಕ ಆತ್ಮಹತ್ಯೆಗೆ ಶರಣಾಗಿದ್ದ. ಶಾಲೆಗೆ ತಡವಾಗುತ್ತಿದ್ದರಿಂದ ಬಾಲಕನನ್ನು ಬೆಳಿಗ್ಗೆ ಅವನ ತಾಯಿ ಗದರಿಸಿದ್ದರು, ಹೀಗಾಗ ಬಾಲಕನನ್ನು ಅಸಮಾಧಾನಗೊಂಡಿದ್ದ ಎಂದು ನೆರೆಹೊರೆಯವರು ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.
ವಿಷ ಸೇವಿಸಿದ ಮೂವರು ವಿದ್ಯಾರ್ಥಿನಿಯರು; ಆತ್ಮಹತ್ಯೆ ಯತ್ನ ವಿಫಲ: ತೀರ್ಥಹಳ್ಳಿ ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯವೊಂದರಲ್ಲಿ ಮಂಗಳವಾರ ಸಂಜೆ ವಿಷ ಸೇವಿಸಿ ಮೂವರು ಪಿಯುಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವು ಇಲಿ ಪಾಷಾಣ ಸೇವಿಸಿರುವುದಾಗಿ ವೈದ್ಯರ ಬಳಿ ಈ ವಿದ್ಯಾರ್ಥಿನಿಯರು ಹೇಳಿಕೊಂಡಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
3 ವರ್ಷದ ಮಗುವನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಂದ ತಾಯಿ ನೇಣಿಗೆ ಯತ್ನ
ಮಂಗಳವಾರ ಸಂಜೆ 6ರ ಹೊತ್ತಿಗೆ ಹಾಸ್ಟೆಲಿನಲ್ಲಿ ತಿಂಡಿ ತಿಂದ ನಂತರ ವಿದ್ಯಾರ್ಥಿನಿಯರ ವರ್ತನೆಯ ಬಗ್ಗೆ ಅನುಮಾನಗೊಂಡ ಇತರ ವಿದ್ಯಾರ್ಥಿನಿಯರು ಹಾಗೂ ಹಾಸ್ಟೆಲ್ ಸಿಬ್ಬಂದಿ ಕೂಡಲೇ ಅವರನ್ನು ಪಟ್ಟಣದ ಸರ್ಕಾರಿ ಜೆಸಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಮೂವರೂ ಸುರಕ್ಷಿತವಾಗಿದ್ದಾರೆ.
ಪಟ್ಟಣದ ಸರ್ಕಾರಿ ಪಿ.ಯು. ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿನಿಯರು ಒಂದೇ ತರಗತಿಯವರು. ತರಗತಿ ಶಿಕ್ಷಕಿಯರ ಹೇಳಿಕೆಯಂತೆ ವಿದ್ಯಾರ್ಥಿನಿಯರು ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಬಗ್ಗೆ ಪೋಷಕರಿಗೆ ತಿಳಿಸುವುದಾಗಿ ತಿಳಿ ಹೇಳಿದ್ದರು ಎನ್ನಲಾಗಿದೆ.