ದೇವಸ್ಥಾನದ ಬಾಗಿಲ ಕೀಲಿ ಮುರಿದ ದುಷ್ಕರ್ಮಿಗಳು ಸಿಸಿ ಕ್ಯಾಮರಾ ಯುನಿಟ್‌, ಸಾವಿರಾರು ರೂಪಾಯಿ ಬೆಲೆ ಮೌಲ್ಯದ ಬೆಳ್ಳಿಯ ಪೂಜಾ ಸಾಮಗ್ರಿಗಳು ಹಾಗೂ ಎರಡು ಹುಂಡಿಗಳನ್ನು ಒಡೆದು ಅದರಲ್ಲಿದ್ದ ಮೂರು ಲಕ್ಷ ಹಣವನ್ನು ದೋಚಿದ್ದಾರೆ.  

ಸಿರವಾರ(ಜು.16): ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮದ ದಿಡ್ಡಿ ಬಸವೇಶ್ವರ ದೇವಸ್ಥಾನದ ಹುಂಡಿ ಒಡೆದು ಹಣ ಕಳವು ಮಾಡಿದ ಘಟನೆ ಶುಕ್ರವಾರ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇವಸ್ಥಾನದ ಬಾಗಿಲ ಕೀಲಿ ಮುರಿದ ದುಷ್ಕರ್ಮಿಗಳು ಸಿಸಿ ಕ್ಯಾಮರಾ ಯುನಿಟ್‌, ಸಾವಿರಾರು ರೂಪಾಯಿ ಬೆಲೆ ಮೌಲ್ಯದ ಬೆಳ್ಳಿಯ ಪೂಜಾ ಸಾಮಗ್ರಿಗಳು ಹಾಗೂ ಎರಡು ಹುಂಡಿಗಳನ್ನು ಒಡೆದು ಅದರಲ್ಲಿದ್ದ ಮೂರು ಲಕ್ಷ ಹಣವನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ದೇವಸ್ಥಾನ ಸಮಿತಿಯ ಅಧ್ಯಕ್ಷ ವೀರಭದ್ರಯ್ಯ ಸ್ವಾಮಿ ದೂರಿನ ಮೇರೆಗೆ ಸಿರವಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್‌ ಸಿಬ್ಬಂದಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.