Tempo Driver Javeed Pasha Attacked Malleshwaram ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಟೆಂಪೋ ಡ್ರೈವರ್ ಜಾವೀದ್ ಪಾಷ ಮೇಲೆ ನಾಲ್ಕೈದು ದುಷ್ಕರ್ಮಿಗಳು ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

ಬೆಂಗಳೂರು(ಸೆ.20): ಟೆಂಪೋ ಡ್ರೈವರ್ ಮೇಲೆ ನಾಲ್ಕೈದು ಜನರು ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿ ಸ್ಥಳದಿಂದ ಪರಾರಿಯಾದ ಘಟನೆ ಬೆಂಗಳೂರಿನ ಮಲ್ಲೇಶ್ವರಂನ ಎಂಡಿ ಬ್ಲಾಕ್ 4ನೇ ಕ್ರಾಸ್‌ನಲ್ಲಿ ನಡೆದಿದೆ.

ಟೆಂಪೋ ಡ್ರೈವರ್ ಜಾವೀದ್ ಪಾಷ (38) ಹಲ್ಲೆಗೊಳಗಾದವ. ಶನಿವಾರ ರಾತ್ರಿ 8:30ರ ಸುಮಾರಿಗೆ ಅಟ್ಯಾಕ್ ಮಾಡಿರೋ ದುಷ್ಕರ್ಮಿಗಳು. ಹಳೆ ದ್ವೇಷದ ಹಿನ್ನೆಲೆ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ.

ಟೀ ಕುಡಿಯುತ್ತಿದ್ದ ವೇಳೆ ಮಚ್ಚಿನೇಟು:

ಶ್ರೀರಾಂಪುರ ನಿವಾಸಿಯಾದ ಜಾವೀದ್, ಎಂಡಿ ಬ್ಲಾಕ್‌ನ ಮಸೀದಿಯಲ್ಲಿ ನಮಾಜ್ ಮಾಡಿ, ಪಕ್ಕದ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ವೇಳೆ ಈ ದಾಳಿ ನಡೆದಿದೆ. ದುಷ್ಕರ್ಮಿಗಳು ಜಾವೀದ್‌ನ ಮೇಲೆ ಮಚ್ಚಿನಿಂದ ದಾಳಿ ಮಾಡಿ, ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಜಾವೀದ್ ಪಾಷ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರಿಂದ ಸ್ಥಳ ಪರಿಶೀಲನೆ:

ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ದಾಳಿಯ ಹಿಂದೆ ಹಳೆಯ ದ್ವೇಷವೇ ಕಾರಣವಿರಬಹುದೆಂದು ಶಂಕಿಸಿದ್ದಾರೆ. ದಾಳಿಕೋರರನ್ನು ಗುರುತಿಸಿ ಬಂಧಿಸಲು ಮಲ್ಲೇಶ್ವರಂ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ