Asianet Suvarna News Asianet Suvarna News

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ; ಶಿವಮೊಗ್ಗದಲ್ಲಿ ನಿಷೇಧಾಜ್ಞೆ

ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ/  ಬೂದಿ ಮುಚ್ಚಿದ ಕೆಂಡದಂತಿರುವ ವಾತಾವರಣ/ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ/ ರಾತ್ರಿ ಸಂಚಾರಕ್ಕೆ ನಿಷೇಧ

Tension grips Shivamogga after attack on Bajrang Dal activist mah
Author
Bengaluru, First Published Dec 3, 2020, 10:17 PM IST

ಶಿವಮೊಗ್ಗ (  ಡಿ. 03)  ಬಜರಂಗದಳದ ಕಾರ್ಯಕರ್ತ ನಾಗೇಶ್ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದ್ದು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. 

ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ನಾಗೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ವಾರದ ಹಿಂದೆ ಸೋಶಿಯಲ್ ಮೀಡಿಯಾ  ಮೂಲಕ ನಾಗೇಶ್ ಗೆ ಬೆದರಿಕೆಯ ಮೆಸೇಜ್ ಬಂದಿತ್ತು. . ಗೋವಿನ ಕಳ್ಳ ಸಾಗಾಣಿಕೆ ತಡೆಗಟ್ಟುವ ಹೋರಾಟದಲ್ಲಿ ನಾಗೇಶ್  ಸಕ್ರಿಯವಾಗಿದ್ದರು. ಇದೇ ಕಾರಣದಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ನೆಹರೂ ಕ್ರೀಡಾಂಗಣದಲ್ಲಿ ವಾಕಿಂಗ್ ಮುಗಿಸಿಕೊಂಡು ವಾಪಾಸ್ ಹೋಗುತ್ತಿದ್ದ ವೇಳೆ  ದುಷ್ಕರ್ಮಿಗಳ ತಂಡ ಹಲ್ಲೆ  ನಾಗೇಶ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದೆ. ಘಟನೆ ನಂತರ ನಗರದಲ್ಲಿ ಐದಾರೂ ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದ ವರದಿಯಾಗಿದೆ.

ಬಾವಿಯೊಳಗೆ ಶ್ರೀಗಂಧ ಬಚ್ಚಿಟ್ಟಿದ್ದ ಶಿವಮೊಗ್ಗದ ಭೂಪ

ಕಾರುಗಳು, 2 ಆಟೋ, 2 ಬೈಕ್, ತರಕಾರಿ ಗಾಡಿಯನ್ನು ಜಖಂ ಗೊಳಿಸಲಾಗಿದೆ. 11 ಜನರಿಗೆ ಗಾಯಗಳಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

ಗಾಂಧಿ ಬಜಾರ್, ಮೀನು ಮಾರುಕಟ್ಟೆ, ಚೋರ್ ಬಜಾರ್, ರವಿ ವರ್ಮ ಬೀದಿ, ಕಸ್ತೂರಾ ಬಾ ರಸ್ತೆಗಳಲ್ಲಿ ಕಿಡಿಗೇಡಿಗಳು ಸಿಕ್ಕ ಸಿಕ್ಕ ಕಡೆ ದಾಳಿ ಮಾಡಿದ್ದಾರೆ.  ಕಾರಣವಿಲ್ಲದೆ 10  ಜನರ ಮೇಲೆ ಹಲ್ಲೆ ನಡೆಸಲಾಗಿದ್ದು ಗಾಯಗಂಡವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Tension grips Shivamogga after attack on Bajrang Dal activist mah

ಪೂರ್ವ ವಲಯದ ಐಜಿಪಿ ರವಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ಶಿವಮೊಗ್ಗ ಎಸ್.ಪಿ.ಶಾಂತರಾಜು ಜೊತೆ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು. ಪರಿಸ್ಥಿತಿ ನಿಯಂತ್ರಣದಲ್ಲಿ ಇದ್ದು ದುಷ್ಕರ್ಮಿಗಳ ಪತ್ತೆಗೆ ತಂಡ ಸಿದ್ಧಮಾಡಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಗಲಭೆ ಹಿನ್ನೆಲೆಯಲ್ಲಿ ಮೂರು ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಮಾಡಲಾಗಿದೆ.  ಶಿವಮೊಗ್ಗದ ದೊಡ್ಡಪೇಟೆ, ತುಂಗಾ ನಗರ ಹಾಗೂ ಕೋಟೆ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.   ರಾತ್ರಿ ಜನ ಸಂಚಾರಕ್ಕೆ ಸಂಪೂರ್ಣ ನಿಷೇಧ  ಹೇರಿದ್ದು ಎಲ್ಲೆಡೆ ಬ್ಯಾರಿಕೇಡ್ ಅಳವಡಿಸಿ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. 

Tension grips Shivamogga after attack on Bajrang Dal activist mah

 

Follow Us:
Download App:
  • android
  • ios