Asianet Suvarna News Asianet Suvarna News

ತುಮಕೂರು ಬಳಿ ಭೀಕರ ಅಪಘಾತ: ಬ್ರಿಡ್ಜ್‌ನಿಂದ ಕೆಳಗೆ ಬಿದ್ದ ಕಾರು; ಸ್ಥಳದಲ್ಲೇ ಮೂವರು ಸಾವು!

ತುಮಕೂರು ಬಳಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದು ಮೂವರು ಮೃತಪಟ್ಟಿರುವ ದುರ್ಘಟನೆ ಶಿರಾ ತಾಲೂಕಿನ ದೊಡ್ಡಾಲದಮರ ರಾಷ್ಟ್ರೀಯ ಹೆದ್ದಾರಿ 48 ರಲ್ಲಿಬಳಿ ನಡೆದಿದೆ. 

Terrible accident near Tumkur 3 death rav
Author
First Published Dec 14, 2022, 9:59 PM IST

ತುಮಕೂರು (ಡಿ.14) : ತುಮಕೂರು ಬಳಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದು ಮೂವರು ಮೃತಪಟ್ಟಿರುವ ದುರ್ಘಟನೆ ಶಿರಾ ತಾಲೂಕಿನ ದೊಡ್ಡಾಲದಮರ ರಾಷ್ಟ್ರೀಯ ಹೆದ್ದಾರಿ 48 ರಲ್ಲಿಬಳಿ ನಡೆದಿದೆ. 

ಶಿರಾ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡಿದೆ. ಬ್ರಿಡ್ಜ್ ಮೇಲಿನಿಂದ ಬಿದ್ದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆದಲ್ಲಿ ಮೃತಪಟ್ಟಿದ್ದಾನೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಶಿರಾ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

6 ಮೃತ ಕಾರ್ಮಿಕರ ನೇತ್ರದಾನ ಮಾಡಿದ ಕುಟುಂಬಸ್ಥರು!

ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಬೆಂಗಳೂರು ನಿವಾಸಿಗಳಾಗಿದ್ದಾರೆ. ಸಿಂಗದೂರಿನಲ್ಲಿ ಸ್ನೇಹಿತನ ಮದುವೆಗೆ ಹೋಗಿದ್ದರು. ಮದುವೆ ಮುಗಿಸಿಕೊಂಡು ವಾಪಸ್ ಬೆಂಗಳೂರು ಕಡೆಗೆ ಹಿಂತಿರುಗುತ್ತಿದ್ದಾಗ ನಡೆದಿರುವ ಘಟನೆ. ಅತಿ ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ರಾಷ್ಟ್ರೀಯ ಹೆದ್ದಾರಿ 48ರಲ್ಲಿರುವ ಬ್ರಿಡ್ಜ್‌ಗೆ ಡಿಕ್ಕಿ ಹೊಡೆದಿದೆ ಬಳಿಕ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ.

ತಾಯಿ-ಮಗು ಆತ್ಮಹತ್ಯೆಗೆ ಯತ್ನ?

ಕುಣಿಗಲ್: ತಾಯಿಯೊಬ್ಬರು ತನ್ನ ನಾಲ್ಕು ವರ್ಷದ ಮಗನೊಂದಿಗೆ ಕೆರೆಗೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಕೆರೆಯಲ್ಲಿ ನಡೆದಿದ್ದು, ಈ ದುರ್ಘಟನೆಯಲ್ಲಿ ಮಗು ನೀರಿನಲ್ಲಿ ಮುಳುಗಿ ಸಾವು. ತಾಯಿ ಬದುಕುಳಿದಿದ್ದಾಳೆ. 

ಕೆರೆಗೆ ಹಾರಿ ಮಗನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ. ಈ ವೇಳೆ ನೀರಿನಲ್ಲಿ ಒದ್ದಾಡುತ್ತಿದ್ದ ತಾಯಿಯನ್ನು ಸ್ಥಳೀಯರು ನೋಡಿ ರಕ್ಷಿಸಿದ್ದಾರೆ.  ದುರಾದೃಷ್ಟವಶಾತ್ ಐದು ವರ್ಷದ ಮಗ ಶಿವಕುಮಾರ ಮೃತಪಟ್ಟಿದ್ದಾನೆ. ತೀವ್ರ ಅಸ್ವಸ್ತಗೊಂಡಿದ್ದ ವಿಜಯಲಕ್ಷ್ಮಿಯನ್ನು ಕುಣಿಗಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಚೇತರಿಸಿಕೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯಲಕ್ಷ್ಮಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾಗಡಿಪಾಳ್ಯ ಗ್ರಾಮದ ನಿವಾಸಿಗಳು ಎನ್ನಲಾಗಿದೆ.  ಆದರೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Karnataka Accident News: ಭೀಕರ ಅಪಘಾತ; ರಾಯಚೂರು ಮೂಲದ 9 ಮಂದಿ ಸ್ಥಳದಲ್ಲೇ ದುರ್ಮರಣ!

ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಚಾಮರಾಜನಗರ : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸವಾರರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ-ಹಂಗಳ ರಸ್ತೆಯಲ್ಲಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಲಕ್ಕೂರು ಗ್ರಾಮದ ಅನಿಲ್ (26), ಜಕ್ಕಳ್ಳಿ ಗ್ರಾಮದ ಚಂದ್ರು (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow Us:
Download App:
  • android
  • ios