ಮುಂದುವರಿದ ಬೆಂ-ಮೈ ಎಕ್ಸ್‌ಪ್ರೆಸ್ ಹೈವೇ ಅಪಘಾತ; ಸಿನಿಮಾ ಸ್ಟೈಲ್‌ನಲ್ಲಿ ಕೆರೆಗೆ ಹಾರಿದ ಕಾರು!

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಾವಿನ ಸರಣಿ ಮುಂದುವರಿದಿದೆ. ಓವರ್ ಸ್ಪೀಡ್‌ನಲ್ಲಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಘಟನೆ ಸಂಕಲಗೆರೆ ಗೇಟ್ ಬಳಿ ನಡೆದಿದೆ.

terrible car accident at mysuru bengaluru expressway at channapattana rav

ಬೆಂಗಳೂರು (ಜೂ.8): ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಾವಿನ ಸರಣಿ ಮುಂದುವರಿದಿದೆ. ಓವರ್ ಸ್ಪೀಡ್‌ನಲ್ಲಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಘಟನೆ ಸಂಕಲಗೆರೆ ಗೇಟ್ ಬಳಿ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಕೋಡಾ ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿದ್ದ ಪ್ರಯಾಣಿಕರು. ಓವರ್ ಸ್ಪೀಡ್‌ನಿಂದ ಸರ್ವಿಸ್ ರಸ್ತೆಗೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಸಿನಿಮಾ ಸ್ಟೈಲ್‌ನಲ್ಲಿ ಕೆರೆಗೆ ಹಾರಿರುವ ಕಾರು. ಅದೃಷ್ಟವಶಾತ್ ಸದ್ಯ ಯಾವುದೇ ಪ್ರಾಣಾಹಾನಿ ಸಂಭವಿಸಿದ ವರದಿಯಾಗಿಲ್ಲ.

ಘಟನೆ ಬಳಿಕ ಸ್ಥಳಕ್ಕೆ ಚನ್ನಪಟ್ಟಣ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

terrible car accident at mysuru bengaluru expressway at channapattana rav

ಕಾರು-ಟ್ರಕ್ ನಡುವೆ ಭೀಕರ ಅಪಘಾತ; ಮಗು ಸೇರಿ 6 ಮಂದಿ ಸ್ಥಳದಲ್ಲೇ ದುರ್ಮರಣ!

28 ದಿನಗಳಲ್ಲಿ 74,915 ಸಂಚಾರ ಉಲ್ಲಂಘನೆ ಪ್ರಕರಣ!

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಪದೇಪದೆ ಅಪಘಾತ ಪ್ರಕರಣ ಹೆಚ್ಚಲು ಕಾರಣ ಓವರ್ ಸ್ಪೀಡ್ ಜೊತೆಗೆ ಸಂಚಾರ ಉಲ್ಲಂಘನೆ ಕಾರಣವಾಗಿದೆ. ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಳವಡಿಸಿರುವ ಆಟೋಮೆಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್ ಪಿಆರ್) ಕ್ಯಾಮೆರಾ ಕಾರ್ಯಾರಂಭ ಮಾಡಿದ ತರುವಾಯ ಕಳೆದ 28 ದಿನಗಳಲ್ಲಿ ಒಟ್ಟು 74,915 ಸಂಚಾರ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು ಮಲ್ಲೇಶ್ವರಂನಲ್ಲಿ ಭೀಕರ ಅಪಘಾತ; ಅಡ್ಡಾದಿಡ್ಡಿ ಕಾರು ಓಡಿಸಿ ಬೈಕ್ ಸವಾರನನ್ನು ಬಲಿ ಪಡೆದ ಕುಡುಕ

ಮೇ 1ರಿಂದ ಮೇ 16ವರೆಗೆ ಒಟ್ಟು 12,192 ಕೇಸ್‌ಗಳು ದಾಖಲಾಗಿತ್ತು. ಇದೀಗ 28 ದಿನಗಳಲ್ಲಿ 74,915 ಸಂಚಾರ ಉಲ್ಲಂಘನೆ ಪ್ರಕರಣಗಳು ವರದಿಯಾಗಿದೆ. ಅದರಲ್ಲೂ ಚಾಲಕರು ಮತ್ತು ಸಹ ಪ್ರಯಾಣಿಕರು ಸೀಟ್‌ ಬೆಲ್ಟ್‌ ಧರಿಸದ ಚಾಲನೆ ಬರೋಬ್ಬರಿ 57,057 ಪ್ರಕರಣಗಳು ದಾಖಲಾಗಿದ್ದರೆ, 10,945 ಅತಿವೇಗದ ಪ್ರಕರಣಗಳು, 6,046 ಲೇನ್ ಉಲ್ಲಂಘನೆ ಪ್ರಕರಣಗಳು ಹಾಗೂ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ 494 ಪ್ರಕರಣಗಳು ವರದಿಯಾಗಿವೆ. ಇದೀಗ ಮತ್ತೊಂದು ಸೇರ್ಪಡೆಯಾದಂತಾಗಿದೆ.

Latest Videos
Follow Us:
Download App:
  • android
  • ios