ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಮದುವೆಗೆ ಕನ್ಯೆ ಸಿಗದ ಕಾರಣಕ್ಕೆ 35 ವರ್ಷದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 10-12 ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದರೂ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದರು.

ಹಾವೇರಿ (ಫೆ.22): ವಯಸ್ಸಾದರೂ ಮದುವೆಗೆ ಕನ್ಯೆ ಸಿಗದ್ದರಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಕಾಶ ಬಸವರಾಜ ಹೂಗಾರ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ ಇವರು ಕಳೆದ 10- 12 ವರ್ಷಗಳಿಂದ ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು. ಆದರೆ, ಇದುವರೆಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ. ಅದೇ ಚಿಂತೆಯಲ್ಲಿ ಕೊರಗುತ್ತಿದ್ದ.

 ಗುರುವಾರ ಮನೆಯ ಬೆಡ್‌ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹಗ್ಗದಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಒದ್ದಾಡುತ್ತಿದ್ದ. ತಕ್ಷಣ ಮನೆಯವರು ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ಈತನ ತಂದೆ ಬಸವರಾಜ ಹೂಗಾರ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ಸಿಗದ ಕನ್ಯೆ.. ಇದೇ ವಂಚಕರಿಗೆ ಬಂಡವಾಳ: ನಕಲಿ ಮದುವೆ ಮಾಡಿ ಹಣ ಸುಲಿಗೆ!