ರೇಪ್ ಕೇಸ್‌ಗೆ ಸಂಬಂಧಿಸದವರನ್ನೂ ಬಂಧಿಸಿದ್ದಾರೆ: ಹಾನಗಲ್ ಸಂತ್ರಸ್ತೆ; ರಾಜಕೀಯ ಜಟಾಪಟಿ ಬೆನ್ನಲ್ಲೇ ಕೇಸ್‌ಗೆ ಹೊಸ ಟ್ವಿಸ್ಟ್
ಪೊಲೀಸರು ಬಂಧಿತರಿಬ್ಬರ ಫೊಟೋ ತೋರಿಸಿದ್ದು, ಅವರಿಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಲ್ಲ ಎಂದು ಹೇಳಿದ್ದೇನೆ. ಜತೆಗೆ, ನನ್ನ ಮೇಲೆ ನಡೆದ ದೌರ್ಜನ್ಯದ ವಿಡಿಯೋದಲ್ಲೂ ಆ ಇಬ್ಬರು ಇರಲಿಲ್ಲ ಎಂದು ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಸ್ಪಷ್ಟಪಡಿಸಿದರು.
ಶಿರಸಿ (ಜನವರಿ 15, 2024): ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿರುವ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಂಧಿತ ಐವರಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಯೇ ಇಲ್ಲ. ಈ ವಿಚಾರವನ್ನು ಪೊಲೀಸರಿಗೂ ತಿಳಿಸಿದ್ದೇನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇದರಿಂದ ರಾಜಕೀಯ ಜಟಾಪಟಿಗೆ ಕಾರಣವಾಗಿರುವ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಹಾನಗಲ್‌ನ ಸಾಂತ್ವನ ಕೇಂದ್ರದಲ್ಲಿದ್ದ ಮಹಿಳೆಯನ್ನು ಭಾನುವಾರ ದಿಢೀರ್ ಆಗಿ ಶಿರಸಿಯಲ್ಲಿರುವ ಆಕೆಯ ಊರಿಗೆ ಪೊಲೀಸರು ಬಿಟ್ಟು ಬಂದಿದ್ದು, ಈ ಸಂಬಂಧವೂ ಆಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ಐದು ಮಂದಿಯನ್ನು ಬಂಧಿಸಿದ್ದು, ಇವರಲ್ಲಿ ಇಬ್ಬರು ನನ್ನ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿಯೇ ಇಲ್ಲ.
ಇದನ್ನು ಓದಿ: ಹಾವೇರಿ ಗ್ಯಾಂಗ್‌ರೇಪ್ ಸಂತ್ರಸ್ತೆಗೆ ಜೀವ ಭಯವಿದ್ದರೂ, ಒಂಟಿಯಾಗಿ ಮನೆಗೆ ಬಿಟ್ಟು ಹೋದ ಪೊಲೀಸರು
ಪೊಲೀಸರು ಬಂಧಿತರಿಬ್ಬರ ಫೊಟೋ ತೋರಿಸಿದ್ದು, ಅವರಿಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಲ್ಲ ಎಂದು ಹೇಳಿದ್ದೇನೆ. ಜತೆಗೆ, ನನ್ನ ಮೇಲೆ ನಡೆದ ದೌರ್ಜನ್ಯದ ವಿಡಿಯೋದಲ್ಲೂ ಆ ಇಬ್ಬರು ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಭದ್ರತೆ ಒದಗಿಸಿಲ್ಲ: ಪೊಲೀಸರು ಸ್ಥಳ ಪರಿಶೀಲನೆ ಎಂದು ಹೇಳಿ ಮನೆಗೆ ತಂದು ಬಿಟ್ಟಿದ್ದಾರೆ. ನನ್ನ ಕುಟುಂಬಸ್ಥರಿಗೂ ಮಾಹಿತಿ ನೀಡದೆ ಬಿಟ್ಟು ಹೋಗಿದ್ದಾರೆ. ಜೀವ ಭಯವಿದ್ದರೂ ಪೊಲೀಸರನ್ನು ಮನೆ ಬಳಿ ಭದ್ರತೆಗೆ ನಿಯೋಜಿಸಿಲ್ಲ ಎಂದು ಸಂತ್ರಸ್ತೆ, ಆಕೆಯ ಪತಿ ಅಸಮಾಧಾನ ವ್ಯಕ್ತಪಡಿಸಿದರು.
ಹಾವೇರಿಯಲ್ಲಿ ನಡೆದಿದ್ದು ನೈತಿಕ ಪೊಲೀಸ್‌ಗಿರಿಯಲ್ಲ, ಸಾಮೂಹಿಕ ಅತ್ಯಾಚಾರ; ಇಲ್ಲಿದ್ದಾರೆ ನೋಡಿ ಗ್ಯಾಂಗ್ ರೇಪಿಸ್ಟ್?
ಕೇಸ್ ಮುಚ್ಚಿಹಾಕಲು ಸಿಎಂ ಸರ್ವ ಪ್ರಯತ್ನ
ಅಲ್ಪಸಂಖ್ಯಾತರ ತುಷ್ಟೀಕರಣದ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕಲು ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ. ಇದರಿಂದ ರಾಜ್ಯದ ಜನ ತಲೆ ತಗ್ಗಿಸುವಂತಾಗಿದೆ.
ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಸಂತ್ರಸ್ತೆಗೆ ನ್ಯಾಯ ಸಿಗುವ ನಿರೀಕ್ಷೆ ಇಲ್ಲ
ಬಿಜೆಪಿ ಮಹಿಳಾ ನಿಯೋಗ ಹಾಗೂ ಮುಖಂಡರು ಸಂತ್ರಸ್ತೆಯನ್ನು ಭೇಟಿಯಾಗುತ್ತಾರೆ ಎಂದು ತಿಳಿದು ಆಕೆಯನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಇಂಥವರಿಂದ ಸಂತ್ರಸ್ತೆಗೆ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಇಲ್ಲ.
ಗೃಹ ಸಚಿವರು ಸಮುದಾಯ ನೋಡಿ ಕೇಸು ಹಾಕಲು ಸೂಚನೆ ಕೊಟ್ಟಿದ್ದಾರೆ; ಮಾಜಿ ಸಿಎಂ ಬೊಮ್ಮಾಯಿ ಆರೋಪ
ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ