Chikkaballapur: ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿ ಲವರ್​ ಜತೆ ನಿರ್ಜನ ಪ್ರದೇಶಕ್ಕೆ ತೆರಳಿದ ಹುಡುಗಿಗೆ ಕಾದಿತ್ತು ಶಾಕ್..​!

*  SSLC ಪರೀಕ್ಷಾರ್ಥಿ ಮೇಲೆ ಅತ್ಯಾಚಾರಕ್ಕೆ ಯತ್ನ 
*  ಪ್ರಿಯಕರ ಸೇರಿ ನಾಲ್ವರು ವಶಕ್ಕೆ
*  ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
 

Three Accused Attempt to Rape on Minor Girl in Chikkaballapur grg

ವರದಿ: ರವಿಕುಮಾರ್ ವಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ(ಏ.12): ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಬರೆಯಲು ಬಂದಿದ್ದ ವಿದ್ಯಾರ್ಥಿನಿ ಮೇಲೆ ಮೂವರು ಕಾಮುಕರು ಅತ್ಯಾಚಾರ(Rape) ನಡೆಸಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಪಾತಬಾಗೇಪಲ್ಲಿ ಬಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. 

ಸೋಮವಾರ ಪರೀಕ್ಷೆ ಮುಗಿಸಿದ ವಿದ್ಯಾರ್ಥಿನಿ(Student) ತನ್ನ ಪ್ರಿಯಕರನ(Love) ಜೊತೆ ಪಾತಬಾಗೇಪಲ್ಲಿ ಬಳಿಯ ನಿರ್ಜನ ಪ್ರದೇಶದ ಬೆಟ್ಟಗುಡ್ಡಗಳತ್ತ ತೆರಳಿದ್ದಳು. ಇನ್ನು ಪ್ರಿಯಕರ ನಾರಾಯಣಸ್ವಾಮಿ ತನ್ನ ಸ್ನೇಹಿತ ಮಂಜು ಜೊತೆ ಬೈಕ್‌ಗಳಲ್ಲಿ ಡ್ರಾಪ್ ಪಡೆದುಕೊಂಡಿದ್ದ. ಇತ್ತ ಬಾಲಕಿ ಹಾಗೂ ಪ್ರಿಯಕರ ನಿರ್ಜನ ಪ್ರದೇಶದಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಪ್ರಿಯಕರನ ಸ್ನೇಹಿತ ಮಂಜು ಹಾಗೂ ಅಲ್ಲಿಯೇ ಮದ್ಯಪಾನದಲ್ಲಿ ತೊಡಗಿದ್ದ ನಾಗರಾಜು, ಸುರೇಶ್ ಸೇರಿ ಪ್ರೇಮಿಗಳ ಸರಸ ಸಲ್ಲಾಪದ ವೀಡಿಯೋ ರೆಕಾರ್ಡ್ ಮಾಡಿಕೊಂಡು ತಮಗೂ ಸಹಕರಿಸುವಂತೆ ಒತ್ತಡ ಹೇರಿ ಬ್ಲಾಕ್ ಮೇಲ್ ಮಾಡಿದ್ದಾರೆ. 

9ನೇ ತರಗತಿ ವಿದ್ಯಾರ್ಥಿನಿಯ ಗ್ಯಾಂಗ್‌ರೇಪ್‌ ಮಾಡಿ ಸುಟ್ಟುಹಾಕಿದ ರಾಜಕಾರಣಿಯ ಮಗ

ಈ ವೇಳೆ ನಾರಾಯಣಸ್ವಾಮಿ ಅಲ್ಲಿಂದ ಓಡಿ ಬಂದು ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ. ಕೂಡಲೇ ಸ್ಥಳೀಯರು ಬೆಟ್ಟದ ಕಡೆಗೆ ಹೋಗಿ ಬಾಲಕಿಯನ್ನು(Minor Girl) ರಕ್ಷಣೆ ಮಾಡಿ ಮೂವರು ಯುವಕರನ್ನು ಹಿಡಿದಿದ್ದಾರೆ. ನಂತರ ಬಾಲಕಿ ಹಾಗೂ ನಾರಾಯಣಸ್ವಾಮಿ ಸೇರಿದಂತೆ ಮೂವರು ಯುವಕರನ್ನು ಬಾಗೇಪಲ್ಲಿ ಠಾಣೆ ಪೊಲೀಸರು(Police) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯರಿಂದ ಅಪ್ರಾಪ್ತ ಬಾಲಕಿಯ ರಕ್ಷಣೆ

ಪ್ರಿಯಕರನ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಬಾಲಕಿಯನ್ನು ತಮಗೂ ಸಹಕರಿಸುವಂತೆ ಆರೋಪಿಗಳು ಒತ್ತಡ ಹೇರುತ್ತಾರೆ. ಈ ವೇಳೆ ಜೊತೆಯಲಿದ್ದ ಪ್ರಿಯಕರ ನಿರ್ಜನ ಪ್ರದೇಶದಿಂದ ಬಂದು ಸ್ಥಳೀಯರ ರಕ್ಷಣೆ ಕೋರಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಜನರು ಯುವತಿಯನ್ನು ರಕ್ಷಿಸಿದ್ದು ಅಲ್ಲದೇ, ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಎಸ್ಎಸ್‌ಎಲ್‌ಸಿ ಪರೀಕ್ಷೆಗೆಂದು ಬೆಂಗಳೂರಿನಿಂದ ಬಂದಿದ್ದ ಬಾಲಕಿ

ಕಳೆದ ಸಾಲಿನಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತೀರ್ಣರಾಗಿದ್ದಳು. ಹೀಗಾಗಿ ಬಾಲಕಿ ಸೋಮವಾರ ಬಾಗೇಪಲ್ಲಿಗೆ ಪರೀಕ್ಷೆ ಬರೆಯಲೆಂದೇ ಬಂದಿದ್ದಳು. ಪರೀಕ್ಷೆ ಬಳಿಕ ಪ್ರಿಯಕರ ನಾರಾಯಣಸ್ವಾಮಿ ಜೊತೆಗೆ ನಿರ್ಜನ ಪ್ರದೇಶಕ್ಕೆ ತೆರಳಿದ್ದಳು. ಕಳೆದ 2 ವರ್ಷಗಳಿಂದ ನಾರಾಯಣಸ್ವಾಮಿ ಜೊತೆ ಪ್ರೀತಿಯಲ್ಲಿದ್ದಳು ಎನ್ನಲಾಗಿದೆ. ಅಪ್ರಾಪ್ತ ಬಾಲಕಿ ಬೆಂಗಳೂರಿನಲ್ಲಿ(Bengaluru) ಕೆಲಸ ಮಾಡಿಕೊಂಡಿದ್ದಳು ಎಂದು ಹೇಳಲಾಗುತ್ತಿದೆ. 

Bengaluru Crime: ಯುವಕನ ಮೇಲೆ ಕಾಮುಕರಿಂದ ಲೈಂಗಿಕ ದೌರ್ಜನ್ಯ

ಬಾಲಕಿಯರ ಬಾಲಮಂದಿರದಲ್ಲಿ ಅಪ್ರಾಪ್ತ ಬಾಲಕಿ

ಪೊಲೀಸರು ಬಾಲಕಿಯನ್ನು ಬಾಲಮಂದಿರದಲ್ಲಿ ಆಶ್ರಯ ನೀಡಿ ತನಿಖೆ ಮುಂದುವರೆಸಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯರನ್ನು ಸಹಜವಾಗಿ ಬಾಲಮಂದಿರದಲ್ಲಿ ಆಶ್ರಯ ನೀಡಿ ಆರೈಕೆ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಾಲಕಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ ಅಂತ ತಿಳಿದು ಬಂದಿದೆ. 

ಆರೋಪಿಗಳಿಗೆ ಡ್ರಿಲ್

ಅಪ್ರಾಪ್ತೆ ಮೇಲಿನ ಅತ್ಯಾಚಾರ ಯತ್ನ ಆರೋಪದಡಿ ಪ್ರಿಯಕರ ಸೇರಿ ನಾಲ್ವರು ಆರೋಪಿಗಳನ್ನು ಚಿಕ್ಕಬಳ್ಳಾಪುರ ನಗರ ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಲಾಗಿದೆ. ಜೊತೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಆರೋಪಿಗಳಿಗೆ ಪೊಲೀಸರು ಮೆಡಿಕಲ್ ಟೆಸ್ಟ್‌ ಮಾಡಿಸಿ ತನಿಖೆಯನ್ನ ಮುಂದುವರೆಸಿದ್ದಾರೆ. 
 

Latest Videos
Follow Us:
Download App:
  • android
  • ios