Asianet Suvarna News Asianet Suvarna News

Mangaluru ಪ್ರಾಧ್ಯಾಪಕಿ ಬಗ್ಗೆ ಅಶ್ಲೀಲ ಬರಹ, ಕಾಲೇಜಿನ ಸಂಚಾಲಕ ಸೇರಿ ಸಿಬ್ಬಂದಿ ಬಂಧನ

ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ, ಕಾಲೇಜಿನ ಸಂಚಾಲಕ ಸೇರಿ ಮೂವರು ಆರೋಪಿಗಳನ್ನು ಪ್ರಾಧ್ಯಾಪಕಿಯ ಕುರಿತು ಮಾನಹಾನಿಕರ ಪತ್ರ ತಯಾರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ.

Three arrested for  harassment of female lecturer of a prestigious college in Bantwal near mangaluru gow
Author
Bengaluru, First Published Apr 20, 2022, 4:59 PM IST

ವರದಿ: ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್

ಮಂಗಳೂರು (ಏ.20): ಪ್ರಾಧ್ಯಾಪಕಿಯ (professor ) ಕುರಿತು ಮಾನಹಾನಿಕರ ಪತ್ರವನ್ನು ಹಾಗೂ ಪೋಸ್ಟರ್ ತಯಾರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ, ಕಾಲೇಜಿನ ಸಂಚಾಲಕ ಸೇರಿ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. 

ಕಾಲೇಜಿನ ಪ್ರಾಧ್ಯಾಪಕಿಯೋರ್ವರ (female lecturer ) ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದರು.‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ( Bantwal )  ಪ್ರತಿಷ್ಠಿತ ಕಾಲೇಜ್ ವೊಂದರ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ಗಲಾಟೆಯಲ್ಲಿ ಕಾಲೇಜಿನ ಮಹಿಳಾ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಪತ್ರ, ಪೋಸ್ಟರ್ ಗಳನ್ನು ತಯಾರಿಸಿ ಹರಿ ಬಿಟ್ಟಿದ್ದಾರೆ.

ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಪ್ರಾದ್ಯಾಪಕಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

Haveri ಕೆಜಿಎಫ್ ಪ್ರದರ್ಶನದ ವೇಳೆ ಶೂಟೌಟ್, ಆರೋಪಿ ಪತ್ತೆಗೆ ಪೊಲೀಸರ ಬಲೆ

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಾದ ಪ್ರಕಾಶ್ ಶೆಣೈ(44), ಪ್ರದೀಪ್ ಪೂಜಾರಿ (37), ತಾರಾನಾಥ ಬಿ ಎಸ್ ಶೆಟ್ಟಿ(32) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು ಕಾಲೇಜಿನ ಸಂಚಾಲಕ ಹಾಗೂ ಪ್ರಾಧ್ಯಾಪಕರಾಗಿದ್ದು, ಅವರು ಜೊತೆಗೂಡಿ ಮಹಿಳಾ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಬರಹವನ್ನು ಪ್ರಾರಂಭದಲ್ಲಿ ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮೂಲಕ ಮಹಿಳಾ ಪ್ರಾಧ್ಯಾಪಕಿಯ ಭಾವಚಿತ್ರದೊಂದಿಗೆ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಅಂಚೆ ಮೂಲಕ ಕಳುಹಿಸಿಕೊಡುತ್ತಿದ್ದರು.

ಇದಾದ ನಂತರ ಮಹಿಳಾ ಪ್ರಾಧ್ಯಾಪಕಿಯ ಮೊಬೈಲ್ ನಂಬ್ರ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ತಯಾರಿಸಿ ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದು, ಇದನ್ನು ನೋಡಿದ ಸಾರ್ವಜನಿಕರು ಮಹಿಳಾ ಪ್ರಾದ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾನಹಾನಿಕರವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು.

Mandya ನಾರಾಯಣಗೌಡ ಆಪ್ತನಿಗೆ ಮತ್ತೊಮ್ಮೆ ಮೂಡಾ ಅಧ್ಯಕ್ಷ ಪಟ್ಟ

ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬವರ ವಿರುದ್ಧ ಈ ಹಿಂದೆ 2019 ನೇ ಇಸವಿಯಲ್ಲಿ ಕಾಲೇಜ್ ಪ್ರಾದ್ಯಪಕಿಯೊಬ್ಬರಿಗೆ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Follow Us:
Download App:
  • android
  • ios