Asianet Suvarna News Asianet Suvarna News

ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್, ಮೂವರು ಆರೋಪಿಗಳ ಬಂಧನ

ಬೆಳಗಾವಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್  ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 18 ಗಂಟೆಯೊಳಗೆ ಬಂಧಿಸಲಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಸುದ್ದಿಗೋಷ್ಠಿ ನಡೆಸಿದ್ದಾರೆ.

Three Arrested In Firing Case On belagavi Sri Ram Sena Leader gow
Author
First Published Jan 8, 2023, 2:30 PM IST

ಬೆಳಗಾವಿ(ಜ.8): ಬೆಳಗಾವಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್  ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 18 ಗಂಟೆಯೊಳಗೆ ಬಂಧಿಸಲಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಸುದ್ದಿಗೋಷ್ಠಿ ನಡೆಸಿ, ಹಣಕಾಸಿನ ವ್ಯವಹಾರ, ವೈಯಕ್ತಿಕ ದ್ವೇಷ ಹಿನ್ನೆಲೆ ಘಟನೆ ನಡೆದಿದೆ. ಶನಿವಾರ ಸಂಜೆ 7.30 ಸುಮಾರಿಗೆ ಹಿಂಡಲಗಾ ಬಳಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಸಂಗಡಿಗರು ವಾಹನದಲ್ಲಿ ಪ್ರಯಾಣಿಸುತ್ತಿರುವಾಗ ಫೈರಿಂಗ್ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದ ಮೂವರು ಫೈರಿಂಗ್ ಮಾಡಿದ್ದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮ ಪೊಲೀಸ್ ಸಿಬ್ಬಂದಿ ಅಲರ್ಟ್ ಆಗಿ 18 ಗಂಟೆಯೊಳಗೆ ಪ್ರಮುಖ ಆರೋಪಿಗಳ ಬಂಧನವಾಗಿದೆ.

ಬೆಳಗಾವಿಯ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ

ಪ್ರಮುಖ ಆರೋಪಿ ಬೆಳಗಾವಿ ನಿವಾಸಿ ಅಭಿಜಿತ್ ಭಾತ್ಕಾಂಡೆ, ಬಸ್ತವಾಡ ಗ್ರಾಮದ ನಿವಾಸಿ ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾ ಬಂಧಿತ ಆರೋಪಿಗಳಾಗಿದ್ದಾರೆ. ಅಭಿಜಿತ್ ಹಾಗೂ ರವಿ ಕೋಕಿತಕರ್ ಮಧ್ಯೆ ರಿಯಲ್ ಎಸ್ಟೇಟ್ ವ್ಯವಹಾರ ಇತ್ತು. 2020ರಲ್ಲಿ ಜನವರಿ 1ರಂದು ಆರೋಪಿ ಅಭಿಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಈ ಪ್ರಕರಣದಲ್ಲಿ ಗಾಯಾಳು ರವಿ ಕೋಕಿತಕರ್ ಪ್ರಮುಖ ಆರೋಪಿಯಾಗಿದ್ದ. ಹಣಕಾಸಿನ ವ್ಯವಹಾರ ಹಳೆಯ ವೈಷಮ್ಯ ಹಿನ್ನೆಲೆ ಈ ಘಟನೆ ನಡೆದಿದೆ.

ಕಲಬುರಗಿ: ಪೊಲೀಸರ ಮೇಲೆಯೇ ಮಾರಕಾಸ್ತ್ರದಿಂದ ದಾಳಿ, ಕೊಲೆ ಆರೋಪಿ ಕಾಲಿಗೆ ಗುಂಡೇಟು

ಯಾವುದೇ ದ್ವೇಷ ಇದ್ದರೂ ಫೈರ್ ಆರ್ಮ್ ಬಳಸಿದ್ದು ಗಂಭೀರ ಅಪರಾಧ. ಪ್ರಾಥಮಿಕ ಮಾಹಿತಿ ಪ್ರಕಾರ ಅಭಿಜಿತ್ ಭಾತ್ಕಾಂಡೆ ಫೈರ್ ಮಾಡಿದ್ದಾನೆ. ಕಂಟ್ರಿ ಪಿಸ್ತೂಲ್ ಬಳಸಿ ಫೈರ್ ಮಾಡಿದ್ದಾರೆ, ಯಾವುದೇ ಲೈಸನ್ಸ್ ಇಲ್ಲ. ಜನರು ಯಾವುದೇ ವದಂತಿ, ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಸುದ್ದಿಗೋಷ್ಠಿ‌ ನಡೆಸಿ ಮಾಹಿತಿ ನೀಡಿದ್ದಾರೆ.

Follow Us:
Download App:
  • android
  • ios