Breaking: ಮಹಾರಾಷ್ಟ್ರದಲ್ಲಿ ಮತ್ತೊಂದು ಭೀಕರ ಅಪಘಾತ: ಯಮ ಸ್ವರೂಪಿ ಟ್ರಕ್‌ಗೆ 15 ಮಂದಿ ಬಲಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ ಟ್ರಕ್‌ 4 ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ಬಳಿಕ, ಹೆದ್ದಾರಿಯಲ್ಲಿದ್ದ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಮಹಾರಾಷ್ಟ್ರ ಹೆದ್ದಾರಿ ಪೊಲೀಸರು ತಿಳಿಸಿದ್ದಾರೆ.

truck accident on mumbai agra highway kills at least 15 people maharashtra police ash

ಮುಂಬೈ (ಜುಲೈ 4, 2023): ಮಹಾರಾಷ್ಟ್ರದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 15 ಜೀವಗಳು ಬಲಿಯಾಗಿವೆ. ಅಲ್ಲದೆ, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಧುಲೆ ಜಿಲ್ಲೆಯ ಶಿರ್ಪುರ ತಾಲೂಕಿನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕಂಟೇನರ್‌ ಟ್ರಕ್‌ ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ ಟ್ರಕ್‌ವೊಂದು 4 ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ಬಳಿಕ, ಹೆದ್ದಾರಿಯಲ್ಲಿದ್ದ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಮಹಾರಾಷ್ಟ್ರ ಹೆದ್ದಾರಿ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರ ಗುರುತು ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಬೇಕಿದ್ದು, ಈ ಅಪಘಾತಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರಿದಿದೆ ಎಂದೂ ವರದಿಯಾಗಿದೆ. 

ಇದನ್ನು ಓದಿ: ಮಹಾರಾಷ್ಟ್ರ ಬಸ್‌ ದುರಂತಕ್ಕೆ ‘ರೋಡ್‌ ಹಿಪ್ನೋಸಿಸ್‌’ ಕಾರಣ: 25 ಜನರ ಜೀವವನ್ನೇ ತೆಗೆದ ಈ ಸಮಸ್ಯೆ!

ಶುಕ್ರವಾರ ರಾತ್ರಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 25 ಮಂದಿ ಬಲಿ
ಮಹಾರಾಷ್ಟ್ರದಲ್ಲಿ ಶನಿವಾರ ನಸುಕಿನ ಜಾವ ಭೀಕರ ಅಪಘಾತವಾಗಿದೆ. ಸವಿನಿದ್ರೆಯಲ್ಲಿದ್ದ 25 ಮಂದಿ ಚಿರನಿದ್ರೆಗೆ ಜಾರಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಜನರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ನಸುಕಿನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸುಮಾರು 8 ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದೂ ತಿಳಿದುಬಂದಿದೆ.

ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 25 ಜನರು ದಾರುಣವಾಗಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದರು. ನಾಗಪುರದಿಂದ ಪೂನಾಕ್ಕೆ ಹೊರಟಿದ್ದ ಬಸ್‌ ಅಪಘಾತಕ್ಕೀಡಾಗಿದ್ದು, ಮೃತರಲ್ಲಿ ಮೂವರು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಇನ್ನು ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ಬಸ್‌ ಅಪಘಾತ: ಸವಿನಿದ್ರೆಯಲ್ಲಿದ್ದ 25 ಮಂದಿ ಸಜೀವ ದಹನ

ಶನಿವಾರ ನಸುಕಿನ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದರೂ, 25 ಜನರ ಪ್ರಾಣ ಹೋಗಿದೆ. ಡಿವೈಡರ್‌ಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. "ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್‌ನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು. 6 - 8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ" ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. 

ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಬ್ಬಂದಿ ಕಾರಣ: ರೈಲ್ವೆ ತನಿಖಾ ವರದಿ; ವಿಧ್ವಂಸಕ ಕೃತ್ಯದ ಅನುಮಾನದ ಬಗ್ಗೆ ಸಿಬಿಐ ತನಿಖೆ ಮುಂದುವರಿಕೆ

Latest Videos
Follow Us:
Download App:
  • android
  • ios