ಮಂಗಳೂರು(ಅ.21): ಬುಧವಾರ ಹಾಡಹಗಲೇ  ರೌಡಿಶೀಟರ್, ಉದ್ಯಮಿ,  ತುಳು ಸಿನಿಮಾ ನಟ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಸುರೇಂದ್ರ ಬಂಟ್ವಾಳ್‌ ಬರ್ಬರ ಹತ್ಯೆಯಾಗಿದೆ.

"

ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿಯ ಬಸ್ತಿಪಡ್ಪುವಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಹಾಡಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ರನ್ನು ಹತ್ಯೆ ಗೈಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

5 ವರ್ಷದ ಹಿಂದೆ ಅಂತರ್ಜಾತಿ ವಿವಾಹ : ಮಹಿಳೆ ನಿಗೂಢ ನಾಪತ್ತೆ-ಹೊರಬಿದ್ದ ಸ್ಫೋಟಕ ವಿಚಾರ

ಸುರೇಂದ್ರ ಬಂಟ್ವಾಳ್ ಹಣಕಾಸು ವ್ಯವಹಾರ ಮಾಡುತ್ತಿದ್ದರು. ಹಣಕಾಸಿನ ವಿಚಾರಕ್ಕೆ ಜೊತೆಗಿದ್ದ ವ್ಯಕ್ತಿಗಳು ಬಂಟ್ವಾಳ್ ರನ್ನು ಹತ್ಯೆ ಮಾಡಿರಬಹುದು ಎಂಬ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ಸುರೇಂದ್ರ

2018ರಲ್ಲಿ ಬಡ್ಡಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಮಚ್ಚಿನಿಂದ ಹಲ್ಲೆ ಪ್ರಕರಣದಲ್ಲಿ ಸುರೇಂದ್ರ ಹೆಸರು ಕೇಳಿ ಬಂದಿತ್ತು. ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬಂಟ್ವಾಳ್ ಬೆದರಿಕೆ ಹಾಕಿದ್ದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ‌ಮೇಲೆ ಸುರೇಂದ್ರ ಹೊರಬಂದಿದ್ದರು.

ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ರೌಡಿಶೀಟರ್‌ ಆಗಿದ್ದು ಬಳಿಕ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ತುಳು ಸಿನಿಮಾ ಚಾಲಿಪೋಲಿಲುನಲ್ಲೂ ಇವರು ನಟಿಸಿದ್ದರು. ಕನ್ನಡ ಚಿತ್ರ ಸವರ್ಣದೀರ್ಘ ಸಂಧಿ ಚಿತ್ರದಲ್ಲೂ ನಟಿಸಿದ್ದರು.