ಹುಬ್ಬಳ್ಳಿ(ಸೆ.13): ಗಾಂಜಾ ಅಡ್ಡೆ ಮೇಲೆ ದಾಳಿ ಇಬ್ಬರನ್ನ ಬಂಧಿಸುವಲ್ಲಿ ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ಯಶಸ್ವಿಯಾದ ಘಟನೆ ಇಂದು(ಭಾನುವಾರ) ನಡೆದಿದೆ. ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಲಕ್ಷಾಂತರ ರೂ. ಮೌಲ್ಯದ 6 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. 

ಸಮುಂದರ ಸಿಂಗ್ ಹಾಗೂ ಸಮೇಂದ್ರ ಸಿಂಗ್ ಬಂಧಿತ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಎಂ.ಎಸ್ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. 

ಹುಬ್ಬಳ್ಳಿ: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದಂಗಡಿಯಲ್ಲಿ ಕಳ್ಳತನ, ಇಬ್ಬರ ಬಂಧನ

ಬಂಧಿತ ಆರೋಪಿಗಳಾದ ಸಮುಂದರ ಸಿಂಗ್ ಹಾಗೂ ಸಮೇಂದ್ರ ಸಿಂಗ್ ಹೊರ ರಾಜ್ಯದಿಂದ ಗಾಂಜಾ ತಂದು ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.