ಬೆಂಗಳೂರು: ಮೋಜು ಮಾಡಲು ಬೈಕ್‌ ಕದಿಯುತ್ತಿದ್ದವರ ಬಂಧನ

ಅಶೋಕ ನಗರ ವ್ಯಾಪ್ತಿಯಲ್ಲಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನ ಕಳುವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ಆರೋಪಿಗಳ ಬಂಧನ  

Two Arrested for Bike Theft Cases in Bengaluru grg

ಬೆಂಗಳೂರು(ಡಿ.04): ಮೋಜು ಮಾಡಲು ಸುಲಭವಾಗಿ ಹಣ ಹೊಂದಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೀಲಸಂದ್ರ ನಿವಾಸಿಗಳಾದ ವಿಜಯ್‌ (21) ಮತ್ತು ಇಮ್ರಾನ್‌ (21) ಬಂಧಿತರು. ಆರೋಪಿಗಳಿಂದ .5 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಅಶೋಕ ನಗರ ವ್ಯಾಪ್ತಿಯಲ್ಲಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನ ಕಳುವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ಆರೋಪಿಗಳನ್ನು ಬಂಧಿಸಲಾಗಿದೆ.

RAICHUR: ಸಿರವಾರ ಠಾಣೆ ಪಿಎಸ್‌ಐ ಕಿರುಕುಳ ಆರೋಪ, ಡೆತ್‌ನೋಟ್‌ ಬರೆದು ಯುವಕ ನಾಪತ್ತೆ

ಆರೋಪಿಗಳು ವೃತ್ತಿಪರ ಕಳ್ಳರಾಗಿದ್ದು, ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು. ಕದ್ದ ವಾಹನಗಳನ್ನು ಮಾರಾಟ ಮಾಡಿ ಮೋಜು ಮಾಡುತ್ತಿದ್ದರು. ಈ ಹಿಂದೆ ಕೆಲ ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿಗಳು ಜಾಮೀನು ಪಡೆದು ಹೊರಬಂದ ಬಳಿಕವೂ ತಮ್ಮ ಹಳೇ ಚಾಳಿ ಮುಂದುವರೆಸಿದ್ದರು. ಇವರ ಬಂಧನದಿಂದ ಅಶೋಕ ನಗರ ಸೇರಿದಂತೆ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಐದು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.
 

Latest Videos
Follow Us:
Download App:
  • android
  • ios