ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆಳಗಾವಿ ನಗರದ ಮಾರ್ಕೆಟ್‌ ಠಾಣೆಯ ಪೊಲೀಸರು 

ಬೆಳಗಾವಿ(ಸೆ.08):  ಮಹಿಳೆ ಮೇಲೆ ಇಬ್ಬರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್‌ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೈಲಹೊಂಗಲ ತಾಲೂಕಿನ ಮಾಸ್ತಮರಡಿ ಗ್ರಾಮದ ಯಲ್ಲಪ್ಪ ನಾಯಕ ಮತ್ತು ಆತನ ಗೆಳೆಯ ದುರ್ಗೇಶ ಬಂಧಿತ ಆರೋಪಿಗಳು. ಸದ್ಯ ಇಬ್ಬರು ಆರೋಪಿಗಳು ಬೆಳಗಾವಿ ನಗರದಲ್ಲಿ ವಾಸವಾಗಿದ್ದರು. ಆರೋಪಿಗಳು ನಗರ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಆನಿಗೋಳಕ್ಕೆ ಕರೆದುಕೊಂಡು ಹೋಗುವುದಾಗಿ ಸುಳ್ಳು ಹೇಳಿ ನಂಬಿಸಿದ್ದಾರೆ. ಬಳಿಕ ಆನಿಗೋಳ ಮನೆಯೊಂದರಲ್ಲಿ ಕೂಡಿಹಾಕಿ ಇಬ್ಬರು ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. 

Bengaluru Crime News: ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್

ಅತ್ಯಾಚಾರಕ್ಕೊಳಗಾದ ಮಹಿಳೆ ಮೂಲತಃ ಬೆಳಗಾವಿ ನಗರದವಳಾಗಿದ್ದು ನಾಲ್ಕು ವರ್ಷದ ಹಿಂದೆ ಮಹಾರಾಷ್ಟ್ರದ ಶಿರೋಳ ತಾಲೂಕಿನ ಗ್ರಾಮವೊಂದರ ಯುವಕನ ಜೊತೆಗೆ ಮದುವೆಯಾಗಿತ್ತು. ಎರಡು ವರ್ಷದ ಹಿಂದೆ ಗಂಡ ತೀರಿಕೊಂಡ ಹಿನ್ನೆಲೆ ಮಹಿಳೆ ಗಂಡನ ಮನೆ ಮತ್ತು ಬೆಳಗಾವಿಯಲ್ಲಿರುವ ತವರು ಮನೆಯಲ್ಲಿ ನೆಲೆಸಿದ್ದಳಂತೆ. ಅತ್ಯಾಚಾರಕ್ಕೊಳಗಾದ ಮಹಿಳೆ ಬೆಳಗಾವಿಯ ಮಾರ್ಕೆಟ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಮಾರ್ಕೆಟ್‌ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.