ಮೇ 13ರಂದು ಮಧ್ಯಾಹ್ನ ಕಾಚರಕನಹಳ್ಳಿಯಲ್ಲಿ ಇರುವ ಅನಿಲ್‌ ರೆಡ್ಡಿ ಅವರ ಮನೆಯ ಆವರಣಕ್ಕೆ ನುಗ್ಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಇರಿಸಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಬೆಂಗಳೂರು(ಮೇ.16): ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮನಾಭ ರೆಡ್ಡಿ ಸಹೋದರನ ಪುತ್ರ ಅನಿಲ್‌ ರೆಡ್ಡಿ ಅವರ ಮನೆಯ ಆವರಣದಲ್ಲಿದ್ದ ದ್ವಿಚಕ್ರ ವಾಹನಕ್ಕೆ ಬೆಂಕಿ ಹಂಚಿದ ಆರೋಪದಡಿ ಇಬ್ಬರು ಯುವಕರನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Add Asianetnews Kannada as a Preferred SourcegooglePreferred

ಕೆ.ಜಿ.ಹಳ್ಳಿ ನಿವಾಸಿಗಳಾದ ಮುಬಾರಕ್‌ ಮತ್ತು ಹಫೀಜ್‌ ಬಂಧಿತರು. ಆರೋಪಿಗಳು ಟ್ಯಾನರಿ ರಸ್ತೆಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇ 13ರಂದು ಮಧ್ಯಾಹ್ನ ಕಾಚರಕನಹಳ್ಳಿಯಲ್ಲಿ ಇರುವ ಅನಿಲ್‌ ರೆಡ್ಡಿ ಅವರ ಮನೆಯ ಆವರಣಕ್ಕೆ ನುಗ್ಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಇರಿಸಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bengaluru: ಪತ್ನಿ ಶೋಕಿಗೆ ಹಣ ಹೊಂದಿಸಲಾಗದೇ, ಮಕ್ಕಳ ಸಮೇತ ತಂದೆಯೂ ಆತ್ಮಹತ್ಯೆ!

ಆರೋಪಿಗಳು ಅಂದು ಕಾಚರಕನಹಳ್ಳಿಯಲ್ಲಿರುವ ಅನಿಲ್‌ ರೆಡ್ಡಿ ಮನೆಯ ಆವರಣಕ್ಕೆ ನುಗ್ಗಿ ದ್ವಿಚಕ್ರ ವಾಹನದಲ್ಲಿ ಪೆಟ್ರೋಲ್‌ ಕದಿಯುತ್ತಿದ್ದರು. ಪ್ಲಾಸ್ಟಿಕ್‌ ಬಾಟಲಿಯಲ್ಲಿ ಪೆಟ್ರೋಲ್‌ ತುಂಬಿಕೊಳ್ಳುತ್ತಿದ್ದರು. ಅದೇ ವೇಳೆ ಆರೋಪಿಯೊಬ್ಬ, ಸಿಗರೆಟ್‌ ಸೇದಲು ಮುಂದಾಗಿದ್ದ. ಇಬ್ಬರನ್ನೂ ಕಂಡ ಸ್ಥಳೀಯರು ಜೋರಾಗಿ ಕೂಗಾಡಿ ಹಿಡಿಯಲು ಯತ್ನಿಸಿದ್ದರು. ಈ ವೇಳೆ ಹೆದರಿದ್ದ ಆರೋಪಿಗಳು, ಪೆಟ್ರೋಲ್‌ ಹಾಗೂ ಸಿಗರೆಟ್‌ ಸ್ಥಳದಲ್ಲೇ ಎಸೆದು ಪರಾರಿಯಾಗಿದ್ದರು. ಇದರಿಂದ ಸಿಗರೆಟ್‌ ಹಾಗೂ ಪೆಟ್ರೋಲ್‌ನಿಂದ ಬೆಂಕಿ ಹೊತ್ತಿಕೊಂಡು ದ್ವಿಚಕ್ರವಾಹನಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಈ ಇಬ್ಬರೂ ಆರೋಪಿಗಳು ಉದ್ದೇಶಪೂರ್ವಕವಾಗಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಇದು ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.