ವಿಡಿಯೋ ಮುಂದಿಟ್ಟು ಮಾಲೀಕಯ್ಯ ಗುತ್ತೇದಾರ್‌ಗೆ ಮಹಿಳೆಯಿಂದ ಬ್ಲ್ಯಾಕ್‌ಮೇಲ್: 20 ಲಕ್ಷಕ್ಕೆ ಬೇಡಿಕೆ
ಕಲಬುರಗಿ ನಗರದ ಆಳಂದ ನಿವಾಸಿಗಳಾದ ಮಂಜುಳಾ, ಆಕೆಯ ಪತಿ ಶಿವರಾಜ್ ಪಾಟೀಲ್ ಬಂಧಿತರಾಗಿದ್ದು, ಆರೋಪಿಗಳಿಂದ ಪೊಲೀಸರು ಮೊಬೈಲ್ ಜಪ್ತಿ ಮಾಡಿದ್ದಾರೆ. ಬ್ಲಾಕ್‌ಮೇಲ್ ಹಣವನ್ನು ಗುತ್ತೇದಾರ್ ಪುತ್ರನಿಂದ ಸ್ವೀಕರಿಸಲು ಬೆಂಗಳೂರಿನ ಮಾಲ್‌ವೊಂದರ ಬಳಿ ಮಂಜುಳಾ ದಂಪತಿ ಬಂದಿದ್ದಾಗ ಸಿಸಿಬಿ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು(ಅ.27): ಸಲುಗೆ ಮಾತುಕತೆಯ ಆಡಿಯೋ-ವಿಡಿಯೋ ಬಿಡುಗಡೆ ಮಾಡದೇ ಇರಲು 20 ಲಕ್ಷ ರು. ಹಣ ನೀಡುವಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಕಲಬುರಗಿ ನಗರದ ಆಳಂದ ನಿವಾಸಿಗಳಾದ ಮಂಜುಳಾ, ಆಕೆಯ ಪತಿ ಶಿವರಾಜ್ ಪಾಟೀಲ್ ಬಂಧಿತರಾಗಿದ್ದು, ಆರೋಪಿಗಳಿಂದ ಪೊಲೀಸರು ಮೊಬೈಲ್ ಜಪ್ತಿ ಮಾಡಿದ್ದಾರೆ. ಬ್ಲಾಕ್‌ಮೇಲ್ ಹಣವನ್ನು ಗುತ್ತೇದಾರ್ ಪುತ್ರನಿಂದ ಸ್ವೀಕರಿಸಲು ಬೆಂಗಳೂರಿನ ಮಾಲ್‌ವೊಂದರ ಬಳಿ ಮಂಜುಳಾ ದಂಪತಿ ಬಂದಿದ್ದಾಗ ಸಿಸಿಬಿ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು: ಭಾವನ ಜತೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಗಂಡನನ್ನೇ ಕೊಂದ ಹೆಂಡ್ತಿ!
ವಿಡಿಯೋ ಮುಂದಿಟ್ಟು ಬ್ಲ್ಯಾಕ್ ಮೇಲ್:
ಹಲವು ವರ್ಷಗಳಿಂದ ಕಾಂಗ್ರೆಸಲ್ಲಿ ಸಕ್ರಿಯವಾಗಿದ್ದ ಮಂಜುಳಾ, ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಪಕ್ಷದಲ್ಲಿದ್ದ ಕಾರಣ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ನಿತ್ಯ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಆಕೆ, ಬಳಿಕ ಇವುಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಲಾರಂಭಿಸಿದ್ದಳು. 2 ದಿನ ಹಿಂದೆ ಬೆಂಗಳೂರಿನಲ್ಲಿ ನೆಲೆಸಿರುವ ಮಾಲೀಕಯ್ಯ ಪುತ್ರ ರಿತೀಶ್ ಭೇಟಿಯಾಗಿ ಡೀಲ್ ನಡೆಸಲು ಮಂಜುಳಾ ದಂಪತಿ ಮುಂದಾಗಿದ್ದರು. ಈ ಬಗ್ಗೆ ರಿತೇಶ್ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.