ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು(ಮೇ.30): ಭ್ರಷ್ಟಾಚಾರ ಆರೋಪದಡಿ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣೆಯ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ಸಂಚಾರ ಪೊಲೀಸ್‌ ಕಾನ್ಸ್‌ಟೇಬಲ್‌ಗಳಾದ ಭರತ್‌ ಮತ್ತು ವಿರೂಪಣ್ಣ ಬಂಧಿತರು. ಇತ್ತೀಚೆಗೆ ಮಾಗಡಿ ರಸ್ತೆಯ ನೈಸ್‌ ರಸ್ತೆ ಜಂಕ್ಷನ್‌ನಲ್ಲಿ ಟ್ರಕ್‌ ಚಾಲಕರಿಗೆ ಮಾಸಿಕ ಹಫ್ತಾ ನಿಗದಿಗೊಳಿಸಿ, ಲಂಚ ಸ್ವೀಕರಿಸುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ಮೊಬೈಲ್‌ನಲ್ಲಿ ವಿಡಿಯೊ ಮಾಡುತ್ತಿರುವುದನ್ನು ಗಮನಿಸಿದ್ದ ಕಾನ್ಸ್‌ಟೇಬಲ್‌ಗಳು ರಸ್ತೆಯಲ್ಲಿ ಓಡಲಾರಂಭಿಸಿದ್ದರು. ಟ್ರಕ್‌ ಚಾಲಕ ಸಹ ಪೊಲೀಸರನ್ನು ಬೆನ್ನಟ್ಟಿ ವಿಡಿಯೊ ಮಾಡಿದ್ದ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸಾರ್ವಜನಿಕರು ಸಂಚಾರ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

 183 ದಿನಗಳಿಂದ ಸಿಮೆಂಟ್ ಕಂಪನಿ ವಿರುದ್ಧ ಧರಣಿ ನಡೆಸುತ್ತಿದ್ದ ರೈತ ಸಾವು!

ಲಂಚ ಸ್ವೀಕಾರದ ವಿಡಿಯೊ ಸಾಕ್ಷ್ಯ ಲಭ್ಯವಾದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಈ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ. ಅಷ್ಟೇ ಅಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.