ನೆಲಮಂಗಲ(ಜೂ.11): ವರದಕ್ಷಿಣೆ ಹಾಗೂ ಭ್ರೂಣ ಹತ್ಯೆ ಕಿರುಕುಳಕ್ಕೆ ಎರಡುವರೆ ತಿಂಗಳ ಗರ್ಭಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ.  

ರಮ್ಯಾ(23) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಬೆಂಗಳೂರಿನ ಜಿಂದಾಲ್‌ಗರದ ನಿವಾಸಿ ರಮ್ಯಾ ಕಳೆದ ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ಚಿಕ್ಕಬಿದುರಕಲ್ಲು ನಿವಾಸಿ ಅರುಣ್‌ ಜತೆಗೆ ಸಾಂಸಾರಿಕ ಜೀವನಕ್ಕೆ ಕಾಲಿಟ್ಟಿದ್ದಳು. 

ಕಂಪ್ಲಿ: ಹೆಂಡ್ತಿ ಕೊಲೆಗೈದ ಆರೋಪ, ನೇಣಿಗೆ ಶರಣಾದ ಗಂಡ

ವರದಕ್ಷಿಣೆ ಕಿರುಕುಳದಿಂದ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪಾಲಕರು ದೂರಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರಮಾ ಪತಿ ಅರುಣ್‌ ಹಾಗೂ ಮಾವನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

News In 100 Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್‌

"