*  ಸೆಲೆಬ್ರಿಟಿ, ವಿದ್ಯಾರ್ಥಿಗಳೇ ಟಾರ್ಗೆಟ್‌*  ಬಂಧಿತರಿಂದ 3 ಕೋಟಿ ಡ್ರಗ್ಸ್‌ ಜಪ್ತಿ*  ಪ್ರಶಾಂತಿ ಎಕ್ಸ್‌ಪ್ರೆಸ್ಸಲ್ಲಿ ಗಾಂಜಾ ಸಾಗಾಟ 

ಬೆಂಗಳೂರು(ಜ.30): ‘ಆಫ್ರಿಕನ್‌ ಕಿಚನ್‌’(African Kitchen) ನೆಪದಲ್ಲಿ ಗ್ರಾಹಕರಿಗೆ ಡ್ರಗ್ಸ್‌(Drugs) ಉಣ ಬುಡಿಸುತ್ತಿದ್ದ ಇಬ್ಬರು ಚಾಲಾಕಿ ವಿದೇಶಿ ಪ್ರಜೆಗಳನ್ನು ಸೆರೆಹಿಡಿದ ಗೋವಿಂದಪುರ ಠಾಣೆ ಪೊಲೀಸರು(Police), ಆರೋಪಿಗಳಿಂದ .3 ಕೋಟಿ ಮೌಲ್ಯದ ಡ್ರಗ್ಸ್‌ ಅನ್ನು ಜಪ್ತಿ ಮಾಡಿದ್ದಾರೆ.

ಹೊರಮಾವು ನಿವಾಸಿಗಳಾದ ಸಿಕ್ಸ್‌ಟಸ್‌ ಯುಚೆಕ್‌ ಹಾಗೂ ಚುಕ್ವುಡಬೆನ್‌ ಹೆನ್ರಿ ಬಂಧಿತರು(Arrest). ಆರೋಪಿಗಳಿಂದ(Accused) 1.5 ಕೆ.ಜಿ ಎಂಡಿಎಂಎ ಕ್ರಿಸ್ಟಲ್‌, 120 ಗ್ರಾಂ ಎಂಡಿಎಂಎ, ಎರಡು ಪ್ಲಾಸ್ಟಿಕ್‌ ಕ್ಯಾನ್‌ಗಳಲ್ಲಿ ತುಂಬಿದ್ದ 16.5 ಕೆ.ಜಿ ಎಂಡಿಎಂಎ ಮಿಕ್ಸ್‌ ವಾಟರ್‌, 300 ಗ್ರಾಂ ಗಾಂಜಾ ಎಣ್ಣೆ ಹಾಗೂ ಕಾರು ಸೇರಿದಂತೆ .3 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಚ್‌ಬಿಆರ್‌ ಲೇಔಟ್‌ನ 1ನೇ ಹಂತದಲ್ಲಿ ಕಾರಿನಲ್ಲಿ ಬಂದು ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ್ದಾಗ ಮಾಹಿತಿ ಪಡೆದು ಪೆಡ್ಲರ್‌ಗಳನ್ನು(Peddler) ಗೋವಿಂದಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್‌ ಗುಳೇದ್‌ ತಿಳಿಸಿದ್ದಾರೆ.

Drugs Mafia: ರೈಲಿನಲ್ಲಿ 1.5 ಕೋಟಿ ಡ್ರಗ್ಸ್‌ ಸಾಗಿಸುತ್ತಿದ್ದ ಉಗಾಂಡಾ ಮಹಿಳೆ ಬಂಧನ

ನೈಜೀರಿಯಾ(Nigeria) ದೇಶದ ಯುಚೆಕ್‌ ಹಾಗೂ ಹೆನ್ರಿ, ನಾಲ್ಕು ವರ್ಷಗಳ ಹಿಂದೆ ಬಟ್ಟೆವ್ಯಾಪಾರ ಸೋಗಿನಲ್ಲಿ ನಗರಕ್ಕೆ ಬಂದಿದ್ದರು. ಬಳಿಕ ಹೊರಮಾವು ಸಮೀಪದ ಅಗರದಲ್ಲಿ ಆಫ್ರಿಕನ್‌ ಕಿಚನ್‌ ಹೆಸರಿನಲ್ಲಿ ಹೋಟೆಲ್‌ ಆರಂಭಿಸಿದ ಆರೋಪಿಗಳು, ಸುಲಭವಾಗಿ ಹಣ ಸಂಪಾದನೆಗೆ ಡ್ರಗ್ಸ್‌ ದಂಧೆಗಿಳಿದಿದ್ದರು. ದೆಹಲಿ ಹಾಗೂ ಮುಂಬೈನಿಂದ ಕಡಿಮೆ ಬೆಲೆಗೆ ಡ್ರಗ್ಸ್‌ ತಂದು ನಗರದಲ್ಲಿ ಸೆಲೆಬ್ರಿಟಿಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ-ಬಿಟಿ ಕಂಪನಿ ಉದ್ಯೋಗಿಗಳು ಸೇರಿದಂತೆ ಇತರರಿಗೆ ಈ ಇಬ್ಬರು ಪೂರೈಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಬೈಲ್‌ ಮೂಲಕ ಗ್ರಾಹಕರನ್ನು(Customers) ಸಂಪರ್ಕಿಸುತ್ತಿದ್ದ ಆರೋಪಿಗಳು, ಗ್ರಾಹಕರಿಗೆ ಸೂಚಿಸಿದ ಸ್ಥಳಕ್ಕೆ ಹೋಗಿ ಡ್ರಗ್ಸ್‌ ಪೂರೈಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಗೋವಿಂದಪುರ ಠಾಣೆ ಇನ್ಸ್‌ಪೆಕ್ಟರ್‌ ಆರ್‌.ಪ್ರಕಾಶ್‌ ನೇತೃತ್ವದ ತಂಡ, ಎಚ್‌ಬಿಆರ್‌ ಲೇಔಟ್‌ 1ನೇ ಹಂತದಲ್ಲಿ ಗ್ರಾಹಕರಿಗೆ ಡ್ರಗ್ಸ್‌ ಪೂರೈಸಲು ಬಂದಾಗ ಆರೋಪಿಗಳು ಸೆರೆ ಹಿಡಿದಿದ್ದಾರೆ. ಈ ಜಾಲದಲ್ಲಿ 11 ಮಂದಿ ಇದ್ದು, ದಾಳಿ ಬಳಿಕ ತಪ್ಪಿಸಿಕೊಂಡಿರುವ ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪ್ರಶಾಂತಿ ಎಕ್ಸ್‌ಪ್ರೆಸ್ಸಲ್ಲಿ ಗಾಂಜಾ ಸಾಗಾಟ: ಸೆರೆ

ಬೆಂಗಳೂರು: ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ(Prashanthi Express Train) ಅಕ್ರಮವಾಗಿ ಗಾಂಜಾ(Marijuana) ಸಾಗಣೆ ಮಾಡುತ್ತಿದ್ದ ಇಬ್ಬರು ಡ್ರಗ್‌ ಪೆಡ್ಲರ್‌ಗಳನ್ನು ನಗರದ ಕಂಟೋನ್ಮೆಂಟ್‌ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

Drugs Mafia: ಹೊಸ ವರ್ಷದ ಪಾರ್ಟಿಗೆ ಮಾದಕ ವಸ್ತು ಪೂರೈಕೆ: ಪೆಡ್ಲರ್‌ ಬಂಧನ

ಒಡಿಶಾ ಮೂಲದ ಉಪೇಂದ್ರ ಕಾರಡ್‌(50) ಮತ್ತು ರಂಜನ್‌ ಬೆಬಾತ್‌ರ್‍(56) ಬಂಧಿತರು. ಆರೋಪಿಗಳಿಂದ 15.5 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳು ಪ್ರಯಾಣಿಕರ ಸೋಗಿನಲ್ಲಿ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಒಡಿಶಾದಿಂದ ನಗರಕ್ಕೆ ಗಾಂಜಾ ಸಾಗಣೆ ಮಾಡುತ್ತಿದ್ದರು. ಶನಿವಾರ ಬೆಳಗ್ಗೆ 11.30ರ ಸುಮಾರಿಗೆ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲು ನಗರದ ಕಂಟೋನ್ಮೆಂಟ್‌ ರೈಲು ನಿಲ್ದಾಣಕ್ಕೆ ಬಂದಿದೆ. ಈ ವೇಳೆ ಆರೋಪಿಗಳು ರೈಲು ಇಳಿದು ಗಾಂಜಾ ತುಂಬಿದ್ದ ಬ್ಯಾಗ್‌ ಹಿಡಿದು 1ನೇ ಪ್ಲಾಟ್‌ ಫಾಮ್‌ರ್‍ನಲ್ಲಿ ಬರುತ್ತಿದ್ದರು. ಈ ವೇಳೆ ಅನುಮಾನಗೊಂಡು ಆರೋಪಿಗಳನ್ನು ವಶಕ್ಕೆ ಪಡೆದು ಬ್ಯಾಗ್‌ ತಪಾಸಣೆ ಮಾಡಿದಾಗ ಗಾಂಜಾ ಪೊಟ್ಟಣಗಳು ಇರುವುದು ಬೆಳಕಿಗೆ ಬಂದಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ(Court) ಹಾಜರು ಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳು ಒಡಿಶಾದಿಂದ ಗಾಂಜಾ ತಂದಿದ್ದಾಗಿ ಹೇಳಿದ್ದಾರೆ. ನಗರದಲ್ಲಿ ಯಾರಿಗೆ ಮಾರಾಟ ಮಾಡಲು ತಂದಿದ್ದರು. ಇವರ ಸಂಪರ್ಕದಲ್ಲಿ ಯಾರು ಇದ್ದಾರೆ ಇತ್ಯಾದಿ ಮಾಹಿತಿಗಳು ಮುಂದಿನ ವಿಚಾರಣೆಯಿಂದ ತಿಳಿದು ಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಕಂಟೋನ್ಮೆಂಟ್‌ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.